ಕೋವಿಡ್ ಮೂರನೇ ಅಲೆ ಬರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು:ಆರ್.ಅಶೋಕ್

ಬೆಂಗಳೂರು: ಓಮಿಕ್ರಾನ್ ಎಲ್ಲ ಕಡೆ ಹೆಚ್ಚಾಗುತ್ತಿದ್ದು,  2ನೇ ಅಲೆಯಲ್ಲಿ ಸಾಕಷ್ಟು ಸಾವುನೋವನ್ನು ಅನುಭವಿಸುವಂತಾಯಿತು. ಹೀಗಾಗಿ ಜನರ ರಕ್ಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸದ್ಯಕ್ಕೆ ಯಾವುದೇ ಕಠಿಣ ನಿಯಮಗಳನ್ನು ಜಾರಿ ಮಾಡಿಲ್ಲ. ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದರೆ ಆಸ್ಪತ್ರೆಗಳನ್ನು ಸುಸ್ಥಿತಿಯಲ್ಲಿಡಲು ಸೂಚನೆ ಕೊಡಲಾಗಿದೆ. ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಬರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು

ಆಕ್ಸಿಜನ್ ಪ್ಲಾಂಟ್, ಆಕ್ಸಿಜನ್ ಸಹಿತ ಹಾಸಿಗೆಗಳು ಸುಸ್ಥಿತಿಯಲ್ಲಿಡಲು ಆಸ್ಪತ್ರೆಗಳಿಗೆ ಸೂಚಿಸಿದ್ದೇವೆ. 2ನೇ ಅಲೆಯಿಂದ ಸಾಕಷ್ಟು ಪಾಠ ಕಲಿತುಕೊಂಡಿದ್ದೇವೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.

ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್‍ರ ಅಕಾಲಿಕ ಅಗಲಿಕೆ ನೋವು ತಂದಿದ್ದು, ಇಡೀ ದೇಶವೇ ನೋವಿನಲ್ಲಿದೆ. ನೆರೆಯ ಪಾಕಿಸ್ತಾನದಲ್ಲಿ ವ್ಯಂಗ್ಯ ಮಾಡಿ ಸಂಭ್ರಮಿಸಲಾಗುತ್ತಿರುವುದು ಹೀನ ಮನಸ್ಥಿತಿಯನ್ನು ತೋರುತ್ತದೆ ಎಂದು ಇದೇ ಸಂದರ್ಭದಲ್ಲಿ ಬೇಸರ ವ್ಯಕ್ತಪಡಿಸಿದರು.

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ರಾವತ್ ಅವರು ಪಾಕಿಸ್ತಾನದ ವಿರುದ್ಧದ ಹೋರಾಟದಲ್ಲೂ ಭಾಗಿಯಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸಿದರು.

Swathi MG

Recent Posts

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

15 mins ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

33 mins ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

37 mins ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

1 hour ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

1 hour ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

1 hour ago