News Karnataka Kannada
Thursday, May 02 2024
ಬೆಂಗಳೂರು

ಗಣೇಶ ಮೂರ್ತಿ ಎತ್ತರದ ನಿರ್ಬಂಧ ಹಿಂಪಡೆಯಲಿ: ಶಿವಕುಮಾರ್

Dkshi Dt 19 6 21 No19621 13 Newsk 0976964141
Photo Credit :

ಬೆಂಗಳೂರು: ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಎತ್ತರದ ಗಣೇಶ ಮೂರ್ತಿ ಇಡಬೇಕೆಂಬ ನಿರ್ಬಂಧ ಹೇರುವ ಮೂಲಕ ಮೂರ್ತಿ ತಯಾರಕರ ಬದುಕಿನ ಜತೆ ಸರ್ಕಾರ ಚೆಲ್ಲಾಟವಾಡಿದೆ. ತಕ್ಷಣ ಈ ಆದೇಶ ಹಿಂಪಡೆಯಬೇಕು ಮತ್ತು ಮೂರ್ತಿ ತಯಾರಕರಿಗೆ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಕೋವಿಡ್ ಸಮಯದಲ್ಲಿ ಆದಾಯ ಇಲ್ಲದಿದ್ದ ಮೂರ್ತಿ ತಯಾರಕರು, ತಮ್ಮ ಬಳಿ ಇದ್ದ ಹಣದಿಂದ ಮೂರ್ತಿಗಳನ್ನು ತಯಾರಿಸಿದ್ದಾರೆ. ಸರ್ಕಾರ ಅವರಿಗೆ ಕೋವಿಡ್ ಪರಿಹಾರ ನೀಡಿಲ್ಲ. ಕೊನೆ ಕ್ಷಣದಲ್ಲಿ ಇಂಥ ನಿರ್ಬಂಧ ಹೇರಿದರೆ ಅವರ ಸ್ಥಿತಿ ಏನಾಗಬೇಕು ಎಂದು ಪ್ರಶ್ನಿಸಿದ್ದಾರೆ.

ಗಣೇಶೋತ್ಸವಕ್ಕೆ ಕಡಿವಾಣ ಹಾಕುವ ಭರದಲ್ಲಿ ಭಕ್ತ ಹಾಗೂ ಭಗವಂತನ ನಡುವೆ ಸರ್ಕಾರ ಕಂದಕ ನಿರ್ಮಿಸಿರುವುದು ದುರ ದೃಷ್ಟಕರ ಸಂಗತಿ. ಗಣೇಶ ಪ್ರತಿ ಮೆಯ ಎತ್ತರವನ್ನು ಸೀಮಿತಗೊ ಳಿಸಿ, ದೇವರಿಗೂ ನೀನು ಇಷ್ಟೇ ಎತ್ತರ ಇರಬೇಕು ಎಂದು ನಿಯಂತ್ರಣ ಹೇರುತ್ತಿದ್ದಾರೆ ಎಂದು ಕುಟುಕಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಜನ ಸೇರಬಾರದು, ಮೆರವಣಿಗೆ ಮಾಡಬಾರದು ಎಂಬುದನ್ನು ಒಪ್ಪುತ್ತೇವೆ. ಆದರೆ, ಗಣೇಶನ ಪ್ರತಿಮೆ ‌ಎತ್ತರ ಇಷ್ಟೇ ಇರಬೇಕೆಂಬ ನಿರ್ಬಂಧದ ಹಿಂದೆ ಯಾವ ತರ್ಕ ಇದೆ. ಹಿಂದೂ ಸಂಸ್ಕೃತಿಯ ವಕ್ತಾರರು ಎಂದು ಹೇಳಿಕೊಳ್ಳುವವರು ಮಾಡುವ ಕೆಲಸ ಇದೇನಾ ಎಂದು ‌ಪ್ರಶ್ನಿಸಿದ್ದಾ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು