ಬೆಂಗಳೂರು: ಗಣೇಶ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 10ರಂದು ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.
ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಪಶುಪಾಲನೆ ಇಲಾಖೆ ಆದೇಶ ಹೊರಡಿಸಿದ್ದು, ಸೆ.10ರಂದು ಬಿಬಿಎಂಪಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ನಿಷೇಧಿಸಲಾಗಿದೆ. ಜೊತೆಗೆ, ಮಳಿಗೆಗಳಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಸೂಚನೆ ನೀಡಿದೆ.