News Karnataka Kannada
Sunday, May 05 2024
ಬೆಂಗಳೂರು

ಗ್ರಂಥಪಾಲಕರಿಗೆ ಗೌರವಧನ ಹೆಚ್ಚಳ ಮಾಡಿದ ರಾಜ್ಯ ಸರಕಾರ

Untitled 1
Photo Credit :

ಬೆಂಗಳೂರು: ರಾಜ್ಯ ಸರ್ಕಾರವು ಗ್ರಾಮಪಂಚಾತಿಗಳ ಗ್ರಂಥಾಲಯ ಮೇಲ್ವಿಚಾರಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನವನ್ನು 7 ಸಾವಿರ ರೂ.ನಿಂದ 12 ಸಾವಿರ ರೂ. ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರ ಕೆಲಸದ ಅವಧಿಯನ್ನು 6 ಗಂಟೆಯವರೆಗೆ ನಿಗಧಿಪಡಿಸಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿದ ಗಂಟೆಗಳು ಮತ್ತು ವಿಭಜಿತ ಸಮಯವನ್ನು ಗಮನದಲ್ಲಿಟ್ಟುಕೊಂಡು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಗೌರವಧನವನ್ನು 7 ಸಾವಿರ ರೂ.ಗಳಿಂದ 12 ಸಾವಿರ ರೂ.ಗಳಿಗೆ ಹೆಚ್ಚಿಸಲು ಹಾಗೂ ಗ್ರಂಥಾಲಯ ಮೇಲ್ವಿಚಾರಕರಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಕಲ್ಪಿಸಿ ಬಯೋಮೆಟ್ರಿಕ್ ಹಾಜರಾತಿ ಆಧಾರದ ಮೇಲೆ ಗೌರವಧನ ಪಾವತಿಸಲು ಮತ್ತು ಹೆಚ್ಚುವರಿ ಗೌರವಧನ ಪಾವತಿಸುವ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು