ಬೆಂಗಳೂರು: ಚಾಕು ಹಾಗೂ ಟ್ರೇಗಳಲ್ಲಿ ಚಿನ್ನ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಕೆಐಎ) ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ 298 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಬಂದ 6-ಇ-1486 ಸಂಖ್ಯೆಯ ವಿಮಾನದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದ ವೇಳೆ ಇಬ್ಬರು ಪ್ರಯಾಣಿಕರ ಲಗೇಜ್ಗಳನ್ನು ತಪಾಸಣೆ ಮಾಡಿದಾಗ ಎರಡು ಚಾಕುಗಳು ಹಾಗೂ ಟ್ರೇಗಳಲ್ಲಿ ಚಿನ್ನ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತದ್ದರು. ಕೂಡಲೇ ಇಬ್ಬರು ಪ್ರಯಾಣಿಕರನ್ನು ಬಂಧಿಸಿ, 298 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಹೇಳಿದ್ದಾರೆ.