ಚಾರ್ಜ್‌ ಹಾಕುವ ವಿಷಯಕ್ಕೆ ಸ್ನೇಹಿತರ ಗಲಾಟೆ ; ಓರ್ವನ ಕೊಲೆ

ಬೆಂಗಳೂರು: ಮೊಬೈಲ್ ನ್ನು ಚಾರ್ಜ್ ಮಾಡುವ ವಿಷಯಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಗಲಾಟೆಯು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ.
ಮಧ್ಯಪ್ರದೇಶ ಮೂಲದ ಇಬ್ಬರು ಯುವಕರು ಕೂಲಿ ಕೆಲಸ ಮಾಡಿಕೊಂಡು ರಾಜಾಜಿನಗರದ ಮನೆಯಲ್ಲಿ ವಾಸವಾಗಿದ್ದರು. ಆದರೆ ಕೊಠಡಿಯಲ್ಲಿ ಒಂದೇ ಪ್ಲಗ್‌ ಪಾಯಿಂಟ್‌ ಇತ್ತು. ಇಬ್ಬರು ಮೊಬೈಲ್ ಚಾರ್ಜ್ ಹಾಕಲು ಒಂದೇ ಅದನ್ನೇ ಬಳಕೆ ಮಾಡುತ್ತಿದ್ದರು. ಈ ವೇಳೆ ನಾನು ಮೊದಲು ಛಾರ್ಜ್‌ ಮಾಡಿಕೊಳ್ಳುತ್ತೇನೆ ಎಂಬ ವಿಷಯಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದು, ಆರೋಪಿ ಚಾರ್ಜ್​ ಮಾಡುತ್ತಾನೆ.
ಇದಕ್ಕೆ ಮೃತ ಯುವಕ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಕುಪಿತಗೊಂಡ ಆರೋಪಿ, ಮೃತ ಯುವಕನಿಗೆ‌ ಸೌದೆಯಿಂದ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವಗೊಂಡ ಯುವಕನನ್ನು ಆಸ್ಪತ್ರೆಗೆ ಸಾಗಿಸಿದ್ದು, ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ. ಈ ಸಂಬಂಧ ರಾಜಾಜಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Indresh KC

Recent Posts

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

3 mins ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

6 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

13 mins ago

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ : ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ.

18 mins ago

ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಬಂಧನ

ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌…

31 mins ago

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ : ಆನ್‌ಲೈನ್‌ನಲ್ಲಿ ಹೀಗೆ ನೋಡಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದೆ. ಈ ವರ್ಷದ ತೇರ್ಗಡೆ ಪ್ರಮಾಣ…

40 mins ago