ಜೈಲುಗಳಲ್ಲಿರುವ ಕೈದಿಗಳಿಗೆ ನವೆಂಬರ್ 1 ರಿಂದ ಜೈಲಿನಲ್ಲೇ ಶಿಕ್ಷಣ ನೀಡುವ ಸಾಕ್ಷರತಾ ಕಾರ್ಯಕ್ರಮ ಆರಂಭ : ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದ ಜೈಲುಗಳಲ್ಲಿರುವ ಕೈದಿಗಳಿಗೆ ನವೆಂಬರ್ 1 ರಿಂದ ಜೈಲಿನಲ್ಲೇ ಶಿಕ್ಷಣ ನೀಡುವ ಸಾಕ್ಷರತಾ ಕಾರ್ಯಕ್ರಮವನ್ನು ಆರಂಭಿಸುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ವಿವಿಧ ಜೈಲುಗಳಲ್ಲಿ ಹದಿನಾರು ಸಾವಿರ ಖೈದಿಗಳಿದ್ದು, ಈ ಪೈಕಿ ಅನಕ್ಷರಸ್ಥ ಕೈಜಿಗಳು ಎಷ್ಟು ಎಂಬುದರ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಪ್ರಾಥಮಿಕ ಮಾಹಿತಿ ಪ್ರಕಾರ 6 ಸಾವಿರ ಮಂದಿ ಅನಕ್ಷರಸ್ಥ ಕೈದಿಗಳಿದ್ದಾರೆಂದು ತಿಳಿದುಬಂದಿದೆ.

ಇವರಿಗೆ ಶಿಕ್ಷಣ ನೀಡಲು ಪೊಲೀಸ್ ಇಲಾಖೆ ರೂಪುರೇಷೆ ಸಿದ್ಧಪಡಿಸಿದೆ. ಹೆಬ್ಬೆಟ್ಟು ಒತ್ತಿ ಜೈಲಿಗೆ ಬಂದವರನ್ನು ಸಹಿ ಹಾಕಿ ಹೊರಕಳಿಸಲಾಗುತ್ತದೆ. ಹೀಗಾಗಿ ಈ ಕಾರ್ಯಕ್ರಮ ರೂಪಿಸಲಾಗುತ್ತಿದ್ದು, ಅಕ್ಷರ ಕಲಿಸಲು ಖೈದಿಗಳನ್ನೂ ಬಳಸಿಕೊಳ್ಳಲಾಗುತ್ತದೆ. ಅವರಿಗೆ ಗೌರವ ಧನ ಕೊಡಲಾಗುತ್ತದೆ ಎಂದು ಹೇಳಿದ್ದಾರೆ.

ವಿಚಾರಣಾಧೀನ ಕೈದಿಗಳು ಹಾಗೂ ಸಜಾ ಕೈದಿಗಳು ಸೇರಿದಂತೆ 2-3 ತಿಂಗಳಿನಿಂದ ಹಿಡಿದು ಎಷ್ಟು ವರ್ಷದವರೆಗೆ ಜೈಲಿನಲ್ಲಿ ಇರುತ್ತಾರೋ ಅಷ್ಟೂ ವರ್ಷ ಕಲಿಕಾ ತರಗತಿಗಳು ನಡೆಯಲಿವೆ. ಕನಿಷ್ಟ ಎರಡು ತಿಂಗಳು ಜೈಲಿನಲ್ಲಿದ್ದರೂ ಕಲಿಕೆ ಬಗ್ಗೆ ಆಸಕ್ತಿ ಹುಟ್ಟಿಸಿ ಕಳುಹಿಸುವುದು ನಮ್ಮ ಉದ್ದೇಶ ಎಂದು ತಿಳಿಸಿದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago