ಬೆಂಗಳೂರು

ಟೊಮ್ಯಾಟೊ ಫ್ಲೂ : ಕೇರಳ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಬೆಂಗಳೂರು: ಮಕ್ಕಳಲ್ಲಿ ಕಂಡುಬರುವ ಟೊಮ್ಯಾಟೊ ಫ್ಲೂ ರೋಗದ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದು ಈಗಾಗಲೇ ಇರುವ ಕಾಯಿಲೆಯಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ .

ಅಪರೂಪದ ವೈರಸ್ ರೋಗವಾಗಿರುವ ಟೊಮ್ಯಾಟೊ ಜ್ವರದ ಪ್ರಕರಣಗಳು ಕೇರಳ ರಾಜ್ಯದ ಅರ್ಯಂಕಾರು, ಅಂಚಲ್ ಹಾಗೂ ನೆಡುವತೂರ್ ನಲ್ಲಿ ಕಂಡುಬಂದಿದೆ.

ಸಾಮಾನ್ಯವಾಗಿ 5 ವರ್ಷ ವಯಸ್ಸಿನೊಳಗಿನ ಮಕ್ಕಳಲ್ಲಿ ಕಂಡುಬರುವ ಈ ರೋಗ, ಚರ್ಮದ ತುರಿಕೆ, ಕೆಂಪಾಗುವುದು, ನೀರಡಿಕೆ ಮೊದಲಾದ ಲಕ್ಷಣಗಳನ್ನು ಹೊಂದಿದೆ. ತೀವ್ರ ಜ್ವರ, ಮೈ ಕೈ ನೋವು, ಕೀಲು ನೋವು, ಆಯಾಸ ಮೊದಲಾದ ಲಕ್ಷಣಗಳೂ ಕಂಡುಬರುತ್ತವೆ.

ಕೇರಳದಲ್ಲಿ ಈ ರೋಗದ ಪ್ರಕರಣಗಳು ಪತ್ತೆಯಾಗಿರುವುದರಿಂದ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಕೇರಳದಿಂದ ಆಗಮಿಸುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇರಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ರಾಜ್ಯದ ಯಾವುದೇ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ ಈ ರೋಗ ಲಕ್ಷಣ ಕಂಡುಬರುವ ಮಕ್ಕಳ ಬಗ್ಗೆ ಕೂಡಲೇ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ. ಈ ಬಗ್ಗೆ ಹೆಚ್ಚಿನ ನಿಗಾ ಇರಿಸಲು ಈ ಜಿಲ್ಲೆಗಳೂ ಸೇರಿದಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿಯಿಂದ ಲಿಖಿತ ನಿರ್ದೇಶನ ನೀಡಲಾಗಿದೆ.

Ashika S

Recent Posts

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

14 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

30 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

46 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago