ಡಿಜಿಟಲ್​ ಮಾರ್ಕೆಟಿಂಗ್​, ವೇಸ್ಟ್​ ಮ್ಯಾನೇಜ್​ಮೆಂಟ್​ ಕಂಪೆನಿಗಳ ಮೇಲೆ ಐಟಿ ದಾಳಿ

 ಬೆಂಗಳೂರು : ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಕಛೇರಿಗಳುಳ್ಳ ಡಿಜಿಟಲ್ ಮಾರ್ಕೆಟಿಂಗ್ ಮತ್ತು ಕ್ಯಾಂಪೇನ್ ಮ್ಯಾನೇಜ್ಮೆಂಟ್ ಕಂಪನಿ ಹಾಗೂ ಸಾಲಿಡ್​ ವೇಸ್ಟ್​ ಮ್ಯಾನೇಜ್​ಮೆಂಟ್​ ಕಂಪೆನಿಗಳ ಮೇಲೆ ಐಟಿ ದಾಳಿ ನಡೆದಿದೆ. ಈ ಕಂಪೆನಿಗಳು ಕೋಟ್ಯಂತರ ರೂಪಾಯಿ ಐಟಿ ಅವ್ಯವಹಾರ ಮಾಡಿರುವ ಪ್ರಾಥಮಿಕ ಪುರಾವೆ ಸಿಕ್ಕಿದ್ದು, ತನಿಖೆ ಮತ್ತು ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಐಟಿ ಇಲಾಖೆ ತಿಳಿಸಿದೆ.

ಇದೇ ತಿಂಗಳ 12 ರಂದು ಆರಂಭಿಸಿ ಬೆಂಗಳೂರು, ಸೂರತ್, ಮೊಹಾಲಿ ಸೇರಿದಂತೆ ಏಳು ಕಡೆ ದಾಳಿ ಮತ್ತು ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಬೆಂಗಳೂರಿನಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಮತ್ತು ಕ್ಯಾಂಪೇನ್ ಮ್ಯಾನೇಜ್ಮೆಂಟ್ ಕಂಪನಿ ಡಿಸೈನ್ ಬಾಕ್ಸ್ ಮೇಲೆ ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಹವಾಲ ಆಪರೇಟರ್​ಗಳ ಮೂಲಕ ಹಣ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದೆ. ಕಂಪೆನಿಯ ನಿರ್ದೇಶಕರ ವೈಯಕ್ತಿಕ ಖರ್ಚುಗಳನ್ನು ಬ್ಯುಸಿನೆಸ್ ಖರ್ಚಿನಡಿ ತೋರಿಸಿರುವ ಕಂಪನಿಗಳು, ನಿರ್ದೇಶಕರು ಮತ್ತು ಅವರ ಕುಟುಂಬ ಸದಸ್ಯರ ಹೆಸರಲ್ಲಿ ಐಷಾರಾಮಿ ಕಾರು ಖರೀದಿ ಮಾಡಿದ್ದಾರೆ. ಜೊತೆಗೆ, ಕಡಿಮೆ ಆದಾಯ ತೋರಿಸಿ, ಹೆಚ್ಚು ಖರ್ಚುಗಳನ್ನು ತೋರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಐಟಿ ಇಲಾಖೆ ಹೇಳಿಕೆ ನೀಡಿದೆ.

ಮತ್ತೊಂದು ಘನತ್ಯಾಜ್ಯ ನಿರ್ವಹಣೆ ಮಾಡುತ್ತಿದ್ದ ಕಂಪನಿಗಳ ಮೇಲೂ ಐಟಿ ದಾಳಿ ನಡೆಸಲಾಗಿದ್ದು, ಹಲವು ದಾಖಲೆಗಳು ಮತ್ತು ಡಿಜಿಟಲ್ ಸಾಕ್ಷ್ಯಗಳನ್ನು ಜಪ್ತಿಪಡಿಸಿಕೊಳ್ಳಲಾಗಿದೆ. ಖರ್ಚುಗಳು ಮತ್ತು ಸಬ್ ಕಾಂಟ್ರಾಕ್ಟ್ ಹೆಸರಲ್ಲಿ 70 ಕೋಟಿ ರೂ.ಗಳಷ್ಟು ಬೋಗಸ್ ಬಿಲ್ ತಯಾರಿಸಿರುವುದು ಪ್ರಾಥಮಿಕ ತನಿಖೆ ವೇಳೆ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಆಸ್ತಿಗಳ ಮೇಲೆ ಸುಮಾರು 7 ಕೋಟಿ ರೂ.ಗಳಷ್ಟು ಹೂಡಿಕೆ ಮಾಡಿರುವುದು ಪತ್ತೆಯಾಗಿದ್ದು, ದಾಖಲೆ ಇಲ್ಲದ 1.95 ಕೋಟಿ ರೂ. ಹಣ ಮತ್ತು 65 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕೂಡ ಜಪ್ತಿ ಮಾಡಿಕೊಳ್ಳಲಾಗಿದೆ.

 

Gayathri SG

Recent Posts

ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.

4 mins ago

ಪತಂಜಲಿಯ ಸೋನ್​ಪಾಪ್ಡಿ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ : ಮೂವರ ಬಂಧನ

 ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…

9 mins ago

ಜೀನ್ಸ್ ಪ್ಯಾಂಟ್ , ಟೀ ಶರ್ಟ್‍ಗಳಲ್ಲಿ ಅಕ್ರಮ ಚಿನ್ನ ಸಾಗಾಟ: ನಾಲ್ವರು ವಶಕ್ಕೆ

ಕಸ್ಟಮ್ಸ್ ಅಧಿಕಾರಿಗಳು 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

19 mins ago

ಆರ್‌ಸಿಬಿ vs ಸಿಎಸ್ಕೆ: ಚಾಲೆಂಜ್ ಹಾಕಿ ಖಾಕಿ ಅತಿಥಿಯಾದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್

ಶನಿವಾರ ನಡೆದ ಹೈವೋಲ್ಟೇಜ್ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್…

33 mins ago

ಶೂ ವ್ಯಾಪಾರಿ ಮನೆಯಿಂದ 40 ಕೋಟಿ ರೂ. ನಗದು ವಶಕ್ಕೆ

ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್‌ ಡಂಗ್‌…

36 mins ago

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

1 hour ago