ಬೆಂಗಳೂರು

ದಂಪತಿಗಳ ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ, ಸ್ಥಳದಲ್ಲಿಯೇ ತಾಯಿ, ಮಗ ಸಾವು

ಬೆಂಗಳೂರು : ಧರ್ಮಪುರಿಗೆ ತೆರಳುತ್ತಿದ್ದಂತ ದಂಪತಿಗಳ ಬೈಕ್ ಗೆ ಟಿಪ್ಪರ್ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಟಿಪ್ಪರ್ ಲಾರಿ ಹರಿದು ಸಹಾಯಕ್ಕಾಗಿ ನೆರೆದಿದ್ದಂತ ಜನರನ್ನು ಮಹಿಳೆ ಅಂಗಲಾಚಿದ್ರೂ, ಮಾನವೀಯತೆ ತೋರದೆ ನಡೆದುಕೊಂಡಿದ್ದರಿಂದಾಗಿ, ಸ್ಥಳದಲ್ಲಿಯೇ ನರಳಿ ನರಳಿ ತಾಯಿ ಮಗ ಸಾವನ್ನಪ್ಪಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೆ ಆರ್ ಪುರಂನಿಂದ ಧರ್ಮಪುರಿಗೆ ಶ್ರೀದೇವಿ (21) ಹಾಗೂ ಒಂದು ವರ್ಷದ ಮಗನೊಂದಿಗೆ ಪತಿಯ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಮಾರತಹಳ್ಳಿಯ ರಿಂಗ್ ರಸ್ತೆಯಲ್ಲಿ ಹಿಂಬದಿಯಿಂದ ಟಿಪ್ಪರ್ ಲಾರಿ ಗುದ್ದಿದೆ. ಇದರಿಂದಾಗಿ ಕೆಳಗೆ ಬಿದ್ದಂತ ತಾಯಿ, ಮಗನ ಮೇಲೆಯೆ ಟಿಪ್ಪರ್ ಲಾರಿ ಹರಿದಿದೆ.

ಹೀಗೆ ಟಿಪ್ಪರ್ ಲಾರಿ ಹರಿದಿದ್ದರಿಂದಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ತಾಯಿ, ಮಗ ಒದ್ದಾಡುತ್ತಾ ಆಸ್ಪತ್ರೆಗೆ ದಾಖಲಿಸುವಂತೆ ಬೇಡಿಕೊಂಡರು, ಅಲ್ಲಿದ್ದಂತ ಯಾರೊಬ್ಬರು ಮಾನವೀಯತೆ ತೋರಿಲ್ಲ. ರಕ್ತದ ಮಡುವಿನಲ್ಲಿಯೇ ನರಳಿ ನರಳಿ ಶ್ರೀದೇವಿ ಹಾಗೂ ಅವರ ಒಂದು ವರ್ಷದ ಮಗ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಪತಿ ಎಡಕ್ಕೆ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಹೆಚ್‌ಎಎಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Gayathri SG

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

18 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

36 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

54 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago