ಬೆಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಮುಖ್ಯಮಂತ್ರಿಗೆ ಮನವಿ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಮುಖ್ಯಮಂತ್ರಿ ಬಸವರಾಜು ಬೆಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಪ್ರಮುಖವಾಗಿ ಮಂಗಳೂರು ನಗರವು ವಾಣಿಜ್ಯ ವಹಿವಾಟುಗಳ ಕೇಂದ್ರ ಸ್ಥಾನವಾಗಿದೆ. ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವುದರಿಂದ ಜನರು ತಮ್ಮ ದಿನನಿತ್ಯದ ವ್ಯವಹಾರವನ್ನು ನಡೆಸಲು ಸಹಕಾರಿಯಾಗಲಿದೆ. ಕೈಗಾರಿಕೋದ್ಯಮ, ವೃತ್ತಿಪರ ನೌಕರರು, ದಿನಕೂಲಿ ಕೂಲಿ ಕಾರ್ಮಿಕರು, ಆಟೋ ರಿಕ್ಷಾ ಚಾಲಕರು, ಬಸ್ ನೌಕರರು, ಸಣ್ಣಪುಟ್ಟ ಉದ್ಯಮ ಸೇರಿದಂತೆ ಇನ್ನಿತರ ವರ್ಗದ ಜನರು ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಸಾರ್ವಜನಿಕ ವಲಯದ ಮನವಿಯ ಮೇರೆಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮಾಡಿಕೊಂಡಿದ್ದಾರೆ.

ಕೋವಿಡ್ ನಿಯಂತ್ರಣಕ್ಕಾಗಿ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೋವಿಡ್ ನಿಯಮಗಳನ್ನು ಸ್ವಯಂಪ್ರೇರಿತರಾಗಿ ಪಾಲಿಸಿ ಕೋವಿಡ್ ನಿಯಂತ್ರಣಕ್ಕಾಗಿ ಕೈಜೋಡಿಸುವಂತೆ ಶಾಸಕ ಕಾಮತ್ ಮನವಿ ಮಾಡಿಕೊಂಡಿದ್ದಾರೆ.

Raksha Deshpande

Recent Posts

ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ಬಿಚ್ಚುಮಾತು: ಫ್ಯಾನ್ಸ್​ ಶಾಕ್!

ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು (ಆರ್‌ಸಿಬಿ) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು.…

5 mins ago

ಬಾತ್​ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ !

ನಗರದಲ್ಲಿ​ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.

32 mins ago

ಅಂಜಲಿ‌ ಕೊಲೆ‌ ಕೇಸ್‌ ನಲ್ಲಿ ಕರ್ತವ್ಯ ಲೋಪ : ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಬೆಂಡಿಗೇರಿ ಪೊಲೀಸ್‌ ಇನ್ಸ್‌ಪೆಕ್ಟರ್ ಸೇರಿ ಓರ್ವ ಸಿಬ್ಬಂದಿಯನ್ನು ಪೊಲೀಸ್ ಕಮೀಷನ‌ರ್ ಅಮಾನತು ಮಾಡಿ ಆದೇಶ…

42 mins ago

ಮಹತ್ವದ ತೀರ್ಪಿನಲ್ಲಿ ಇಡಿ ಕಾರ್ಯಗಳಿಗೆ ಕಡಿವಾಣ ಹೇರಿದ ಸುಪ್ರೀಂ ಕೋರ್ಟ್‌ !

ಅತ್ಯಂತ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, ಜಾರಿ ನಿರ್ದೇಶನಾಲಯದ ಕಾರ್ಯಗಳಿಗೆ ಕಡಿವಾಣ ಹೇರಿದೆ. ಯಾವುದೇ ವ್ಯಕ್ತಿ ವಿರುದ್ಧ ದಾಖಲಾದ ಅಕ್ರಮ…

42 mins ago

ಅಪರೇಷನ್‌ ವೇಳೆ ವೈದ್ಯೆಯ ಎಡವಟ್ಟು : ಹೊಟ್ಟೆಯಲ್ಲಿತ್ತು 3 ಅಡಿ ಉದ್ದದ ಬಟ್ಟೆ

ಹೆರಿಗೆ ನಂತರ ಅಪರೇಷನ್‌ ವೇಳೆ ವೈದ್ಯರ ಎಡವಟ್ಟಿನಿಂದ 3 ಅಡಿ ಉದ್ದದ ಬಟ್ಟೆಯನ್ನು ಹೊಟ್ಟೆಯಲ್ಲೇ ಬಿಟ್ಟು ಶಸ್ತ್ರಚಿಕಿತ್ಸೆ ಮಾಡಿರುವ ಘಟನೆ…

53 mins ago

ಫೆಡರೇಷನ್ ಕಪ್: ನೀರಜ್‌ಗೆ ಚಿನ್ನ, ರಾಜ್ಯದ ಮನುಗೆ ಬೆಳ್ಳಿ ಗರಿ

ಒಲಿಂಪಿಕ್ಸ್‌, ವಿಶ್ವ ಚಾಂಪಿಯನ್‌ ನೀರಜ್‌ ಚೋಪ್ರಾ ಫೆಡರೇಶನ್‌ ಕಪ್ ಅಥ್ಲೆಟಿಕ್ಸ್‌ ಕೂಟದ ಜಾವೆಲಿನ್‌ ಎಸೆತದಲ್ಲಿ ನಿರೀಕ್ಷೆಯಂತೆಯೇ ಚಿನ್ನದ ಪದಕ ಗೆದ್ದಿದ್ದಾರೆ.…

1 hour ago