News Karnataka Kannada
Monday, May 13 2024
ಬೆಂಗಳೂರು

ದಸರಾ ಬಳಿಕ ಪೂರ್ಣ ಪ್ರಮಾಣದ ತರಗತಿ ಆರಂಭ

School
Photo Credit :

ಬೆಂಗಳೂರು : ರಾಜ್ಯದಲ್ಲಿ ದಸರಾ ರಜೆಯ ನಂತರ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೂ ಭೌತಿಕ ತರಗತಿ ಆರಂಭದ ಜತೆಗೆ ಎಲ್ಲ ವಿದ್ಯಾರ್ಥಿಗಳಿಗೂ ಬಿಸಿಯೂಟವೂ ಸಿಗಲಿದೆ.

ಅ.10ರಿಂದ 20ರವರೆಗೆ ದಸರಾ ರಜೆ ಇರಲಿದೆ. ಈಗಾಗಲೇ ಸರ್ಕಾರ 6ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ತರಗತಿ ಆರಂಭಿಸಿದೆ. ಆದರೆ, ಬಿಸಿಯೂಟ ಆರಂಭ ಮಾಡಿಲ್ಲ. ಹೀಗಾಗಿ ದಸರಾ ರಜೆ ಮುಗಿಯುತ್ತಿದ್ದಂತೆ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಯ ಜತೆ ಜತೆಗೆ ಎಲ್ಲ ವಿದ್ಯಾರ್ಥಿಗಳಿಗೂ ಬಿಸಿಯೂಟ ವನ್ನು ಶಾಲೆಯಲ್ಲೇ ನೀಡಲಿದೆ.

ಕೊರೊನಾ ಆರಂಭವಾದಾಗಿನಿಂದ ಶಾಲೆಗಳಲ್ಲಿ ಭೌತಿಕ ತರಗತಿ ಸ್ಥಗಿತಗೊಂಡಿರುವ ಜತೆಗೆ ಬಿಸಿ ಯೂಟ ನೀಡುವುದನ್ನೂ ನಿಲ್ಲಿಸಲಾಗಿತ್ತು. ಬಿಸಿಯೂಟದ ಬದಲಿಗೆ ಆಹಾರ ಧಾನ್ಯವನ್ನು ಮಕ್ಕಳಿಗೆ ವಿತರಣೆ ಮಾಡಲಾಗುತ್ತಿತ್ತು. ಈಗ ಕೊರೊನಾ ಪ್ರಕರಣ ಕಡಿಮೆಯಾಗುವ ಜತೆಗೆ 3ನೇ ಅಲೆಯ ಆತಂಕವೂ ಕ್ಷೀಣಿಸಿರುವುದರಿಂದ ಶಾಲೆಗಳಲ್ಲಿ ಭೌತಿಕ ತರಗತಿ ಆರಂಭದ ಜತೆ ಜತೆಗೆ ಬಿಸಿಯೂಟ ನೀಡಲು ಸರ್ಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು