ಬೆಂಗಳೂರು : ದೀಪಾವಳಿ ಬಲಿಪಾಡ್ಯಮಿ ದಿನದಂದು ರಾಜ್ಯದ ಎಲ್ಲ ಹಿಂದೂ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು, ದೀಪಾವಳಿ ಹಬ್ಬದಂದು ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಮುಜರಾಯಿ ಇಲಾಖೆಯ ಎಲ್ಲಾ ದೇವಸ್ಥಾನದಲ್ಲಿ ಗೋಪೂಜೆ ಮಾಡಲು ರಾಜ್ಯ ಸರ್ಕಾರದಿಂದ ಆದೇಶ ನೀಡಿದೆ.
ದೀಪಾವಳಿ ಪ್ರಯುಕ್ತ ರಾಜ್ಯದ ಎಲ್ಲ ದೇಗುಲಗಳಲ್ಲಿ ಗೋಪೂಜೆ ನಡೆಸಲು ಸರ್ಕಾರ ಆದೇಶಿಸಿದೆ. ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಆಯಾ ಜಿಲ್ಲೆಗಳಲ್ಲಿ ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ ಹಾಗೂ ಗೋಪೂಜೆ ನೆರವೇರಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಲಿಪಾಡ್ಯಮಿ ದಿನ ಸಂಜೆ 5.30 ರಿಂದ 6.30ರ ಸಮಯದಲ್ಲಿ ದೇವಾಲಯಗಳಲ್ಲಿ ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯದಲ್ಲಿ ಅರಿಶಿಣ, ಕುಂಕುಮ, ಹೂವುಗಳಿಂದ ಪೂಜಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸಿಗಳನ್ನು ಹಸುಗಳಿಗೆ ನೀಡಿ ಆರಾಧಿಸಲು ಸೂಚನೆ ನೀಡಲಾಗಿದೆ.. ನವೆಂಬರ್ 5ರ ಬಲಿಪಾಡ್ಯಮಿಯಂದು ಪೂಜೆ ಸಲ್ಲಿಸಲು ಆದೇಶ ನೀಡಲಾಗಿದೆ. ಸಂಜೆ 5.30 ರಿಂದ 6.30ರ ವೇಳೆಯಲ್ಲಿ ಪೂಜೆಗೆ ಸೂಚನೆ ಕೊಡಲಾಗಿದೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಗೋ ಪೂಜೆ ಕೂಡ ಪ್ರಮುಖ ಸ್ಥಾನವನ್ನು ಪಡೆದಿದೆ. ಮನೆಯಲ್ಲಿರುವ ದನ ಕರುಗಳಿಗೆ ಅಲಂಕರಿಸಿ, ಅವುಗಳಿಗೆ ಪೂಜೆ ಮಾಡಿ, ತಿಂಡಿತಿನಿಸುಗಳನ್ನು ನೀಡುವ ಸಂಪ್ರದಾಯವು ಈಗಲೂ ನಡೆದು ಬಂದಿದೆ.