ಬೆಂಗಳೂರು: ಕೆಂಪೇಗೌಡ ಜಯಂತಿಯಲ್ಲಿ ಪಾಲ್ಗೊಳ್ಳಲು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಶನಿವಾರ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. ದುಬೈನಲ್ಲಿ ಒಕ್ಕಲಿಗರ ಸಂಘ ಈ ಕಾರ್ಯಕ್ರಮ ಆಯೋಜಿಸಿದೆ.
ಕುಮಾರಸ್ವಾಮಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಜತೆ ಪ್ರಯಾಣ ಬೆಳೆಸಿದ್ದಾರೆ. ನ.4 ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನೊಂದೆಡೆ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರ ಸ್ವಾಮಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರನ್ನು ಭೇಟಿಯಾಗಿ ವಿವಿಧ ರಾಜಕೀಯ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.