ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿರುವ ದೇಗುಲಗಳನ್ನು ತೆರವು ಮಾಡದೇ ಇರುವ ಬಗ್ಗೆ ಸದನದಲ್ಲಿ ಪ್ರತ್ಯೇಕ ವಿಧೇಯಕ ಮಂಡನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಲಾಗಿದೆ. ನಂಜನಗೂಡಿನಲ್ಲಿ ದೇವಾಲಯ ತೆರವು ಮಾಡಿದ ಘಟನೆಗೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸದನದಲ್ಲಿ ಪ್ರತ್ಯೇಕ ವಿಧೇಯಕ ಮಂಡನೆಗೆ ಸಂಪುಟ ಸಭೆ ನಿರ್ಧಾರ ಮಾಡಿದೆ.