ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಾಯಕ ಡಾ.ಸೂರಜ್ ರೇವಣ್ಣ ಅವರಿಗೆಟಿಕೆಟ್ ನೀಡಲು ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷ ಮುಂದಾಗಿದೆ.
ಹಾಸನದಲ್ಲಿ ಶುಕ್ರವಾರ (ನ.19) ಮಧ್ಯಾಹ್ನ 12.15ಕ್ಕೆ ಸೂರಜ್ ರೇವಣ್ಣ ನಾಮಪತ್ರ ಸಲ್ಲಿಸಲಿದ್ದಾರೆ. ಹಾಸನ ಜಿಲ್ಲೆ ಶಾಸಕರ ಸಭೆಯಲ್ಲಿ ಎಚ್.ಡಿ.ರೇವಣ್ಣ ಅವರ ಪುತ್ರ ಸೂರಜ್ ಅವರಿಗೆ ಟಿಕೆಟ್ ನೀಡಲು ಒಮ್ಮತದ ನಿರ್ಣಯ ಅಂಗೀಕರಿಸಲಾಗಿತ್ತು. ಈ ಮೂಲಕ ವೃತ್ತಿಯಲ್ಲಿ ವೈದ್ಯರಾಗಿರುವ ಸೂರಜ್ ರೇವಣ್ಣ ಎಂಎಲ್ಸಿ ಚುನಾವಣೆ ಅಭ್ಯರ್ಥಿಯಾಗಿ ಅಧಿಕೃತವಾಗಿ ರಾಜಕೀಯ ಪ್ರವೇಶಿಸಲಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ಬಹುತೇಕರು ಈಗಾಗಲೇ ರಾಜಕೀಯದಲ್ಲಿ ಪ್ರಭಾವಿ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಇದೀಗ ಇದೇ ಕುಟುಂಬದ ಮತ್ತೊಂದು ಕುಡಿಗೆ ಅವಕಾಶ ನೀಡುವ ಬದಲು, ಕಾರ್ಯಕರ್ತರನ್ನು ಮೇಲೆತ್ತಲು ಪ್ರಯತ್ನಿಸಬೇಕಿತ್ತು ಎಂಬ ಮಾತುಗಳು ಕೇಳಿಬರುತ್ತಿವೆ.