ನಕಲಿ ಗೌರವ ಡಾಕ್ಟರೇಟ್ ನೀಡಿದರೆ ಕ್ರಿಮಿನಲ್ ಕೇಸ್

ಬೆಂಗಳೂರು: ನಕಲಿ ಗೌರವ ಡಾಕ್ಟರೇಟ್ ನೀಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಯಾವುದೇ ಸಂಸ್ಥೆ ನಕಲಿ ಪದವಿ, ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುವುದು ಕಂಡು ಬಂದಲ್ಲಿ ಅಂತಹ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ನಕಲಿ ಪದವಿ, ಗೌರವ ಡಾಕ್ಟರೇಟ್ ನೀಡುವ ಸಂಸ್ಥೆಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ಕ್ರಮ ಜರುಗಿಸಲಾಗುವುದು. 2021 ಫೆಬ್ರವರಿ 26ರಂದು ಈ ಬಗ್ಗೆ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ 23 ವಿಶ್ವವಿದ್ಯಾಲಯಗಳು ಸರ್ಕಾರಿ ವಿವಿಗಳಿಂದ 1856 ಮಂದಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. 21 ಖಾಸಗಿ ವಿವಿಗಳಲ್ಲಿ 23 ಮಂದಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ವಿಶ್ವವಿದ್ಯಾಲಯಗಳ ಅಧಿನಿಯಮದಲ್ಲಿ ಉಲ್ಲೇಖವಾದ ಮಾನದಂಡದ ಅನ್ವಯ ತೀರ್ಮಾನ ಕೈಗೊಂಡು ರಾಜ್ಯಪಾಲರಿಗೆ ಕಳಿಸಲಿದ್ದು, ಅವರು ನೇಮಿಸುವ ತಜ್ಞರ ಸಮಿತಿ ಪರಿಶೀಲನೆ ಬಳಿಕ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ

Raksha Deshpande

Recent Posts

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

16 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

35 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

1 hour ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

2 hours ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

2 hours ago