ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ, ಬೆಲೆ ಏರಿಕೆ ವಿರೋಧಿಸಿ ರೈತಪರ ಸಂಘಟನೆಗಳು ಸೋಮವಾರ ಭಾರತ್ ಬಂದ್ಗೆ ಕರೆ ನೀಡಿವೆ. ಹೀಗಾಗಿ ಈ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದೆಲ್ಲೆಡೆ ಬಿಗಿ ಭದ್ರತೆ ಕಲ್ಪಿಸಿಲು ಖಾಕಿ ಸಿದ್ಧತೆಗೊಂಡಿದೆ.
ನಗರದಲ್ಲಿ ವಿವಿಧ ಸಂಘಟನೆಗಳು ಬಂದ್ಗೆ ಕರೆ ನೀಡಿವೆ. ಹೀಗಾಗಿ ಬೆಂಗಳೂರಿಗೆ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗುತ್ತಿದೆ. ಟೌನ್ಹಾಲ್ನಿಂದ ಮೈಸೂರು ಬ್ಯಾಂಕ್ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ.