News Karnataka Kannada
Monday, April 29 2024
ಬೆಂಗಳೂರು

ನಾಗರಿಕರು ಲಸಿಕೆ ತೆಗೆದುಕೊಳ್ಳುವಂತೆ ಮನವೊಲಿಸಲು ಕ್ರಮಕೈಗೊಳ್ಳಲಾಗುವುದು ಗೌರವ್ ಗುಪ್ತ

Covid Vaccine
Photo Credit :

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಿಸಲು ಅವಶ್ಯಕವಾದ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌‌ ಗುಪ್ತ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ನಾಗರಿಕರು ಲಸಿಕೆ ಪಡೆಯಲೇಬೇಕು ಎಂದು ಕಡ್ಡಾಯಗೊಳಿಸಲು ಸಾಧ್ಯವಿಲ್ಲ. ಈ ವಿಚಾರವಾಗಿ ಜನರ ಮನವೊಲಿಸಿ ಕ್ರಮ ಕೈಗೊಳ್ಳಲಾಗುವುದು” .ಹಾಗಾಗಿ ನಗರದಲ್ಲಿ ಸರಾಸರಿ 350-400 ಕೊರೊನಾ ಪ್ರಕರಣಗಳು ಮಾತ್ರ ಪತ್ತೆಯಾಗಿವೆ” ಎಂದಿದ್ದಾರೆ

“ಶಾಲಾ-ಕಾಲೇಜುಗಳಲ್ಲಿ ತರಗತಿಗಳು ನಡೆಯುತ್ತಿವೆ. ಅಲ್ಲದೇ, ಪೂರ್ಣಪ್ರಮಾಣದಲ್ಲಿ ವಾಣಿಜ್ಯ ಚಟುವಟಿಕೆಗಳು ಪ್ರಾರಂಭವಾಗಿವೆ. ಇದರ ಮಧ್ಯೆಯೂ ಕೊರೊನಾ ಸೋಂಕು ನಿಯಂತ್ರಣದಲ್ಲಿದೆ. ಜನರು ಕೊರೊನಾ ಲಸಿಕೆ ಪಡೆಯುವುದರೊಂದಿಗೆ ಕೊರೊನಾ ನಿಯಮಗಳನ್ನು ಕೂಡಾ ಕಡ್ಡಾಯವಾಗಿ ಪಾಲಿಸಬೇಕು. ಅಲ್ಲದೇ, ಕೊರೊನಾ ಸೋಂಕನ್ನು ನಿಯಂತ್ರಿಸಲು ನೆರವಾಗಬೇಕು” ಎಂದು ತಿಳಿಸಿದ್ದಾರೆ.

“ತಜ್ಞರ ತಂಡವು, ಕೊರೊನಾನಿಂದ ಸಂಭವಿಸಿದ ಸಾವುಗಳ ಲೆಕ್ಕಪರಿಶೋಧನಾ ವರದಿಯನ್ನು ತಯಾರಿಸುತ್ತಿದೆ” ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು