ನಾಳೆಯಿಂದ 1.38 ಲಕ್ಷ ರೇಷ್ಮೆ ಬೆಳೆಗಾರರಿಗೆ ‘ಗುರುತಿನ ಚೀಟಿ’ ವಿತರಣೆ ಆರಂಭ : ಸಚಿವ ಡಾ.ನಾರಾಯಣಗೌಡ

ಬೆಂಗಳೂರು : ರೇಷ್ಮೆ ಇಲಾಖೆ ವತಿಯಿಂದ 1.38 ಲಕ್ಷ ರೇಷ್ಮೆ ಬೆಳೆಗಾರರಿಗೆ ಗುರುತಿನ ಚೀಟಿ ವಿತರಿಸಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ರೇಷ್ಮೆ ಬೆಳೆಗಾರರಿಗೆ ಆಗುತ್ತಿರುವ ಸಮಸ್ಯೆ ತಪ್ಪಿಸುವ ನಿಟ್ಟಿನಲ್ಲಿ 1.38 ಲಕ್ಷ ರೇಷ್ಮೆ ಬೆಳೆಗಾರರಿಗೆ ಗುರುತಿನ ಚೀಟಿ ವಿತರಿಸಲು ನಿರ್ಧರಿಸಲಾಗಿದ್ದು, ನಾಳೆ ಬಳ್ಳಾರಿಯಲ್ಲಿ ಐಡಿ ಕಾರ್ಡ್ ನೀಡುವುದಕ್ಕೆ ಸಚಿವ ನಾರಾಯಣಗೌಡ ಅವರು ಚಾಲನೆ ನೀಡಲಿದ್ದಾರೆ.

ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ರೇಷ್ಮೆ ಇಲಾಖೆಗೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ರೇಷ್ಮೆ ಬೆಳೆಗಾರರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಹಲವು ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಚರ್ಚಿಸಲಾಯಿತು.

ರೇಷ್ಮೆ ಬೆಳೆಗಾರರಿಗೆ ಭರವಸೆ ನೀಡಿದ 20 ದಿನದಲ್ಲೇ ಐಡಿ ಕಾರ್ಡ್ ವಿತರಣೆ

ಶಿವಮೊಗ್ಗದಲ್ಲಿ ರೇಷ್ಮೆ ಬೆಳೆಗಾರರ ಜೊತೆ ನಡೆದ ಸಂವಾದದಲ್ಲಿ ಪೊಲೀಸರು ಸೇರಿದಂತೆ ಹಲವರಿಂದ ಆಗುತ್ತಿರುವ ಸಮಸ್ಯೆಗಳ ಕುರಿತು ಸಚಿವರ ಮುಂದೆ ಅಳಲು ತೋಡಿಕೊಂಡಿದ್ದರು. ಈ ವೇಳೆ ರೇಷ್ಮೆ ಬೆಳೆಗಾರರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಇಲಾಖೆಯಿಂದ ಐಡಿ ಕಾರ್ಡ್ ನೀಡುವುದಾಗಿ ಸಚಿವ ನಾರಾಯಣಗೌಡ ಅವರು ಘೋಷಿಸಿದ್ದರು. ರೈತರಿಗೆ ಭರವಸೆ ನೀಡಿದ 20 ದಿನದಲ್ಲೇ ಐಡಿ ಕಾರ್ಡ್ ನೀಡುವ ಕಾರ್ಯವನ್ನು ಜಾರಿಗೆ ತಂದಿದ್ದಾರೆ. ನಾಳೆ ಬಳ್ಳಾರಿಯಲ್ಲಿ ಉಚಿತ ಐಡಿ ಕಾರ್ಡ್ ನೀಡುವ ಕಾರ್ಯಕ್ರಮಕ್ಕೆ ಸಚಿವ ನಾರಾಯಣಗೌಡ ಅವರು ಚಾಲನೆ ನೀಡಲಿದ್ದಾರೆ. ಹಂತ ಹಂತವಾಗಿ ಎಲ್ಲಾ ಜಿಲ್ಲೆಗಳಲ್ಲಿ ರೇಷ್ಮೆ ಬೆಳೆಗಾರರಿಗೆ ಐಡಿ ಕಾರ್ಡ್ ವಿತರಿಸಲಾಗುತ್ತದೆ ಎಂದು ಸಚಿವ ನಾರಾಯಣಗೌಡ ಅವರು ತಿಳಿಸಿದರು.

 

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago