ಬೆಂಗಳೂರು : ಹಿಂಗಾರು ಮಾರುತಗಳ ಪ್ರಭಾವದಿಂದಾಗಿ ಅಕ್ಟೋಬರ್ 29ರ ನಾಳೆ ಹಾಗೂ ಅ.30ರಂದು ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆ, ಬೆಂಗಳೂರು ಸೇರಿದಂತೆ 15 ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ರಾಜ್ಯ ಹವಾಮಾನ ಇಲಾಖೆಯು, ಹಿಂಗಾರು ಮಾರುತಗಳು ಪ್ರಬಲವಾಗಿದ್ದು, ಗುಡುಗು ಸಹಿತ ಮಳೆಯು ಅಕ್ಟೋಬರ್ 29 ಮತ್ತು 30ರಂದು ಸುರಿಯಲಿದೆ. ಇಂದಿನಿಂದ ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ, ರಾಮನಗರ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇನ್ನೂ ಅಕ್ಟೋಬರ್ 30ರಂದು ಕರಾವಳಿ ಜಿಲ್ಲೆಗಳಾದಂತ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಭಾರೀ ಮಳೆ ಬೀಳಲಿದೆ ಎಂದು ತಿಳಿಸಿದ್ದು, ಈ ಜಿಲ್ಲೆಗಳಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಿದೆ.