ನೊಟೀಸ್ ನೀಡದೆ ಧಾರ್ಮಿಕ ಕೇಂದ್ರಗಳನ್ನು ನೆಲಸಮ ಮಾಡುವಂತಿಲ್ಲ : ಆರ್. ಅಶೋಕ್

ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದಂತೆ   ರಾಜ್ಯದ ಹಲವು ದೇವಾಲಯಗಳನ್ನು ನೆಲಸಮ ಮಾಡುವ ವಿಚಾರದಲ್ಲಿ ಉಂಟಾಗಿರುವ ಗೊಂದಲ, ವ್ಯಾಪಕ ವಿರೋಧ ಹಿನ್ನೆಲೆಯಲ್ಲಿ ಮೊದಲೇ ನೊಟೀಸ್ ನೀಡದೆ ಯಾವುದೇ ಧಾರ್ಮಿಕ ಕೇಂದ್ರಗಳನ್ನು ನೆಲಸಮ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದೇನೆ ಎಂದು ಕಂದಾಯ ಸಚಿವ ಆರ್.   ಶೋಕ್ ತಿಳಿಸಿದ್ದಾರೆ.

ವಿಧಾನಸೌಧದ ಪಡಸಾಲೆಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಧಿಕಾರಿಗಳ ಜೊತೆ ಕೂಡ ಮಾತನಾಡುತ್ತೇನೆ, ಈ ರೀತಿ ಏಕಾಏಕಿ ಸುಪ್ರೀಂ ಕೋರ್ಟ್ ನ ಆದೇಶವೆಂದು ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ, ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಕೂಡ ನಿನ್ನೆ ಮಾತನಾಡಿದ್ದೇನೆ, ದೇವಸ್ಥಾನವನ್ನು ಕೆಡವುದಕ್ಕೆ ಮೊದಲು ಸ್ಥಳೀಯ ಜನರೊಂದಿಗೆ ಚರ್ಚಿಸಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬದಲಿ ಜಾಗವನ್ನು ತೋರಿಸಿ ಆ ಬಳಿಕ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿತ್ತು. ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸ್ಪಷ್ಟವಾದ ಸೂಚನೆ ನೀಡುತ್ತೇನೆ ಎಂದರು.

ದೇವಸ್ಥಾನಗಳನ್ನು ತೆರವುಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳು, ಸ್ಥಳೀಯ ಎಂ ಎಲ್ ಎಗಳು, ಎಂ.ಎಲ್ಸಿ ಗಳ ಜೊತೆ ಕೂಡ ಮಾತನಾಡಿದ್ದೇನೆ, ಇದು ಕೇವಲ ಮೈಸೂರಿಗೆ ಸಂಬಂಧಪಟ್ಟ ವಿಷಯ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಸಂಬಂಧಿಸಿದ್ದು. 12 ವರ್ಷಗಳ ಹಿಂದಿನ ಸುಪ್ರೀಂ ಕೋರ್ಟ್ ಆದೇಶದಲ್ಲಿ ಕೇವಲ ದೇವಸ್ಥಾನ ಮಾತ್ರವಲ್ಲದೆ ಚರ್ಚ್, ಮಸೀದಿಗಳು ಕೂಡ ಇವೆ. ಈ ಬಗ್ಗೆ ಸರ್ಕಾರ ಸದ್ಯದಲ್ಲಿಯೇ ನಿಲುವು ಪ್ರಕಟಿಸಲಿದ್ದು ಅಲ್ಲಿಯವರೆಗೆ ಜಿಲ್ಲಾಧಿಕಾರಿಗಳು ಜನರ ಭಾವನೆ ಮತ್ತು ಸುಪ್ರೀಂ ಕೋರ್ಟ್ ಆದೇಶ ಮಧ್ಯೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡಿದರು.

Raksha Deshpande

Recent Posts

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

1 second ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

11 mins ago

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

16 mins ago

ಮಾಜಿ ಸಚಿವ ಹೆಚ್​.ಡಿ ರೇವಣ್ಣಗೆ ಬಿಗ್ ರಿಲೀಫ್

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ…

37 mins ago

ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದ ರೈತನಿಗೆ ವಂಚಿಸಿದ ಅಪರಿಚಿತ

ಜಿಲ್ಲೆಯ ಹನೂರು ಪಟ್ಟಣದ ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದು ಕೇಳಿದ ರೈತನಿಗೆ ಕೀಡಿಗೇಡಿಯೋರ್ವ ವಂಚಿಸಿ ಹಣ ಲಪಾಟಿಸಿರುವ ಘಟನೆ…

38 mins ago

ಅಕ್ರಮ ಕಲ್ಲುಕೋರೆ : ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ

ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವ ಮುಖಂಡನ ಬಂಧಸಿದ ಹಿನ್ನಲೆ, ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ…

40 mins ago