ಪರಿಶಿಷ್ಟ ರ 106 ವಿದ್ಯಾರ್ಥಿಗಳ ವಿದೇಶ ವ್ಯಾಸಂಗಕ್ಕೆ ನೆರವು: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು : ಪ್ರಬುದ್ಧ ಯೋಜನೆಯಡಿ ಕಳೆದ ಎರಡು ವರ್ಷದಲ್ಲಿ 106 ಮಂದಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಧನಸಹಾಯ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಎನ್.ಎ. ಹ್ಯಾರಿಸ್ ಪ್ರಶ್ನೆಗೆ ಉತ್ತರಿಸಿದ ಅವರು, ಜಗತ್ತಿನ 20 ಪ್ರತಿಷ್ಠಿತ ವಿವಿಗಳಲ್ಲಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್, ಮೂಲವಿಜ್ಞಾನ ಮತ್ತು ಅಪ್ಲೈಡ್ ಸೈನ್ಸ್, ಕೃಷಿ ವಿಜ್ಞಾನ ಮತ್ತು ಮೆಡಿಸಿನ್, ಅಂತಾರಾಷ್ಟ್ರೀಯ ವಾಣಿಜ್ಯ, ಅರ್ಥಶಾಸ್ತ್ರ, ಅಕೌಂಟಿಂಗ್ ಫೈನಾನ್ಸ್, ಮಾನವಿಕ ಶಾಸ್ತ್ರ, ಸಾಮಾಜಿಕ ವಿಜ್ಞಾನ, ಲಲಿತ ಕಲೆ ಮತ್ತು ಕಾನೂನು ವಿಷಯದಲ್ಲಿ ಉನ್ನತ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಕಳೆದ ಎರಡು ವರ್ಷದಲ್ಲಿ 106 ಮಂದಿ ಪರಿಶಿಷ್ಟ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಸರ್ಕಾರ ಧನ ಸಹಾಯ ಮಾಡಿದ್ದು, ಈ ಪೈಕಿ ಡಾ. ಬಿ.ಆರ್. ಅಂಬೇಡ್ಕರ್ ಅವರು ವ್ಯಾಸಂಗ ಮಾಡಿದ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ ನಲ್ಲಿ ರಾಜ್ಯದ ಇಬ್ಬರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದು ಹೆಮ್ಮೆ ತಂದಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯಿಂದ 2019-20ರಲ್ಲಿ 49, 2020-21ರಲ್ಲಿ 45 ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-20ರಲ್ಲಿ 6 ಹಾಗೂ 2020-21ರಲ್ಲಿ 7 ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದಿದ್ದಾರೆ.

Sneha Gowda

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

55 mins ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

1 hour ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

1 hour ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

2 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

3 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

4 hours ago