News Karnataka Kannada
Monday, May 06 2024
ಬೆಂಗಳೂರು

ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪಟ್ಟಿ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಅಂತಿಮ

Cm Bommai
Photo Credit :

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಹೈಕಮಾಂಡ್‌ಗೆ ಕಳುಹಿಸಲಾಗಿದೆ. ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಪಟ್ಟಿ ಅಂತಿಮವಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದಿಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಮಾತ್ರ ಬಾಕಿ ಇದೆ. ಉಳಿದೆಲ್ಲ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪಟ್ಟಿ ಮಾಡಿ ಮಾಡಿ, ಪಕ್ಷದ ವರಿಷ್ಠರಿಗೆ ಕಳುಹಿಸಲಾಗಿದೆ. ನಾಳೆ ಬೆಳಗ್ಗೆಯೊಳಗೆ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆ ಎಂದರು.

ಇಂದಿನಿಂದ ಜನಸ್ವರಾಜ್ ಯಾತ್ರೆ
ಕೊಪ್ಪಳದಲ್ಲಿ ಜನಸ್ವರಾಜ್ ಯಾತ್ರೆಯನ್ನು ಪ್ರಾರಂಭಿಸುತ್ತಿದ್ದೇವೆ. ರಾಜ್ಯದಲ್ಲಿ ನಮ್ಮ ನಾಯಕರಾದ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಿರಿಯ ನಾಯಕರಾದ ಜಗದೀಶ ಶೆಟ್ಟರ್, ಮತ್ತು ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ನಾಲ್ಕು ತಂಡಗಳು ಇಡೀ ರಾಜ್ಯಾದ್ಯಂತ ಸಂಚರಿಸುತ್ತವೆ. ಚುನಾಯಿತ ಜನಪ್ರತಿನಿಧಿಗಳನ್ನು ಭೇಟಿಯಾಗಿ, ಮುಂದಿನ ವಿಧಾನಪರಿಷತ್ ಚುನಾವಣೆಗೆ ಮತದಾರರಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ವಿನಂತಿಸಲಾಗುತ್ತದೆ. ಒಂದು ತಂಡ ದಿನಕ್ಕೆ ಎರಡು ಜಿಲ್ಲೆಗಳಿಗೆ ಪ್ರವಾಸ ಮಾಡುತ್ತದೆ. ನ. 22ರಂದು ಕೊಡಗಿನಲ್ಲಿ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು