ಪಿಆರ್ ಕೆ ಪ್ರೊಡಕ್ಷನ್ ಹೌಸ್ ನ ಕೆಲಸ ಕಾರ್ಯಗಳು ನಿಲ್ಲುವುದಿಲ್ಲ; ಅಶ್ವಿನಿ ಪುನೀತ್ ರಾಜ್ ಕುಮಾರ್

ಬೆಂಗಳೂರು: ಕನ್ನಡಿಗರ ಕಣ್ಮಣಿ ಅಭಿಮಾನಿಗಳ ಪ್ರೀತಿಯ ಅಪ್ಪು ಪುನೀತ್ ರಾಜ್ ಕುಮಾರ್ ಹಠಾತ್ ನಿಧನರಾಗಿ ಇಂದು ಶನಿವಾರಕ್ಕೆ 23 ದಿನಗಳಾಗುತ್ತಿದೆ. ಈ ಸಂದರ್ಭದಲ್ಲಿ ಅವರು ಮಾಡಿರುವ ಕಲಾಸೇವೆ, ಸಮಾಜ ಸೇವೆಗಳ ಬಗ್ಗೆ ಚರ್ಚೆ ಒಂದೆಡೆಯಾದರೆ 2016ರಲ್ಲಿ ಅವರು ಸ್ಥಾಪಿಸಿದ್ದ ಪಿಆರ್ ಕೆ ಪ್ರೊಡಕ್ಷನ್ ಹೌಸ್ ನ ಭವಿಷ್ಯದ ಬಗ್ಗೆ ಕೂಡ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಪುನೀತ್ ರಾಜ್ ಕುಮಾರ್ ನಿಧನ ನಂತರ ಪ್ರೊಡಕ್ಷನ್ ಹೌಸ್ ನ ಕೆಲಸ ಕಾರ್ಯಗಳು ನಿಲ್ಲುವುದಿಲ್ಲ, ಅಪ್ಪು ಅವರ ಕನಸುಗಳನ್ನು ಸಾಕಾರಗೊಳಿಸಲು ಮುಂದುವರಿದುಕೊಂಡು ಹೋಗುತ್ತವೆ ಎಂದು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿರುವುದಲ್ಲದೆ ಅದರ ಜವಾಬ್ದಾರಿಯನ್ನು ಪತಿಯ ಅಗಲುವಿಕೆಯ ನಂತರ ವಹಿಸಿಕೊಂಡಿದ್ದಾರೆ. ಈ ಮೂಲಕ ಪುನೀತ್ ಅಭಿಮಾನಿಗಳಿಗೆ ಉತ್ಸಾಹ ಮೂಡಿಸುವ ಸುದ್ದಿಯನ್ನು ಅವರ ಅನುಪಸ್ಥಿತಿಯಲ್ಲಿ ಅಶ್ವಿನಿ ನೀಡಿದ್ದಾರೆ.

ಹಿಂದೆ ನಡೆದುಹೋಗಿರುವ ಘಟನೆಯನ್ನು ಬದಲಾಯಿಸುವುದು ಅಸಾಧ್ಯವಾಗಿದೆ. ಆದರೆ ಪುನೀತ್ ಅವರಿದ್ದಾಗ ಅವರು ನೀಡಿರುವ ಉತ್ಸಾಹ, ಸ್ಪೂರ್ತಿಯೊಂದಿಗೆ ಪಿಆರ್ ಕೆ ಪ್ರೊಡಕ್ಷನ್ ಮತ್ತು ಪಿಆರ್ ಕೆ ಆಡಿಯೊ ಸಂಸ್ಥೆಗಳ ಕೆಲಸ ಕಾರ್ಯಗಳು ಮುಂದುವರಿಯಲಿದ್ದು ಅವರ ಕನಸುಗಳನ್ನು ನನಸಾಗಿಸಲು ಪ್ರಯತ್ನಿಸುತ್ತೇವೆ. ಅದಕ್ಕಾಗಿ ನಿಮ್ಮೆಲ್ಲರ ಬೆಂಬಲ ಬೇಕು ಎಂದು ಜನರಲ್ಲಿ, ಅಭಿಮಾನಿಗಳಲ್ಲಿ ಅಶ್ವಿನಿ ಮನವಿ ಮಾಡಿಕೊಂಡಿದ್ದಾರೆ.

Gayathri SG

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

8 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

12 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

42 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

49 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

1 hour ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 hour ago