News Karnataka Kannada
Monday, May 06 2024
ಬೆಂಗಳೂರು

ಪುನೀತ್ ರಾಜ್ ಕುಮಾರ್ ವಿಧಿವಶ ಹಿನ್ನೆಲೆ ಎಂಬಿಎ ಅಂತಿಮ ವರ್ಷದ ಪರೀಕ್ಷೆ ಮಂಗಳವಾರಕ್ಕೆ ಮುಂಡೂಡಲಾಗಿದೆ

Exam Postponed
Photo Credit :

ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ನಾಳೆ ನಡೆಯಬೇಕಿದ್ದ ಎಂಬಿಎ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ನಟ ಪುನೀತ್ ರಾಜ್ ಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಎಂಬಿಎ ಅಂತಿಮ ವರ್ಷದ ಪರೀಕ್ಷೆಗಳನ್ನು ಮಂಗಳವಾರಕ್ಕೆ ಮುಂಡೂಡಲಾಗಿದೆ ಎಂದು ಬೆಂಗಳೂರು ಸಿಟಿ ವಿವಿ ಕುಲಪತಿ ಲಿಂಗರಾಜು ತಿಳಿಸಿದ್ದಾರೆ.

ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದ್ದು, ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದೆ. ಆದರೆ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಇನ್ನೂ ಯಾವುದೇ ನಿರ್ಧಾರವಾಗಿಲ್ಲ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು