News Karnataka Kannada
Sunday, April 28 2024
ಬೆಂಗಳೂರು

ಪ್ಯಾರಾ ಮೆಡಿಕಲ್ ಕೌನ್ಸಿಲ್ ಸ್ಥಾಪಿಸಿ: ಡಾ.  ಟಿ.ಎಚ್ ಆಂಜನಪ್ಪ

Untitled 1
Photo Credit : News Kannada

ಬೆಂಗಳೂರು :  ವೈದ್ಯಕೀಯ ಕ್ಷೇತ್ರದಲ್ಲಿ ಅರೆ ವೈದ್ಯಕೀಯ ಸಿಬ್ಬಂದಿಯ ಪಾತ್ರ ಅತ್ಯಂತ ಅಗತ್ಯವಾಗಿದ್ದು, ಇದಕ್ಕಾಗಿ  ಪ್ಯಾರಾ ಮೆಡಿಕಲ್ಸ್ ಕೌನ್ಸಿಲ್  ಸ್ಥಾಪಿಸುವಂತೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಸರ್ಜನ್ ಡಾ.  ಟಿ.ಎಚ್ ಆಂಜನಪ್ಪ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ರಾಷ್ಟ್ರಮಟ್ಟದ 6ನೇ ಮೆಡಿಕಲ್ ಲ್ಯಾಬ್ ಟೆಕ್ನಾಲಾಜಿಸ್ಟ್ ಅಧಿವೇಶನ ಹಾಗೂ ಅರೆ ವೈದ್ಯಕೀಯ ಕ್ಷೇತ್ರದ ಬೆಳವಣಿಗೆ ಕುರಿತ ವಿಚಾರ ಸಂಕೀರ್ಣ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರಮಟ್ಟದಲ್ಲಿ ವೈದ್ಯಕೀಯ ಕೌನ್ಸಿಲ್ ಮಾದರಿಯಲ್ಲಿ ರಾಜ್ಯದಲ್ಲಿ ಪ್ಯಾರಾ ಮೆಡಿಕಲ್ ಕೌನ್ಸಿಲ್ ಸ್ಥಾಪಿಸಬೇಕು. ಇದರಿಂದ ವೈದ್ಯಕೀಯ ಕ್ಷೇತ್ರದ ಬೆಳವಣಿಗೆಗೆ ಸಹಕಾರಿಯಾಗಲಿದ್ದು, ಅರೆ ವೈದ್ಯಕೀಯ ವಲಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದರು.

ಕಳೆದ ಎರಡು ವರ್ಷಗಳಿಂದ ಕೊರೋನಾ ಸಾಂಕ್ರಾಮಿಕ ಕಾಲಾವಧಿಯಲ್ಲಿ ವೈದ್ಯರ  ಪಾತ್ರ ಬಹುಮುಖ್ಯವಾಗಿತ್ತು. ಅಷ್ಟೇ ಮಹತ್ವದ ಜವಾಬ್ದಾರಿಯನ್ನು ಅರೆ ವೈದ್ಯಕೀಯ ಸಿಬ್ಬಂದಿ ನಿರ್ವಹಿಸಿದ್ದರು. ಹೀಗಾಗಿ ಭವಿಷ್ಯದ ಸವಾಲುಗಳನ್ನು ಎದುರಿಸಲು ಅರೆ ವೈದ್ಯಕೀಯ ವಲಯ ಇನ್ನಷ್ಟು ರಚನಾತ್ಮಕ ರೀತಿಯಲ್ಲಿ ಬೆಳವಣಿಗೆ ಸಾಧಿಸಲು ಸರ್ಕಾರ ಸೂಕ್ತ ಕಾರ್ಯಯೋಜನೆ ರೂಪಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಡಾ. ಟಿ.ಎಚ್. ಆಂಜನಪ್ಪ ಅವರು, ಅಗಾಪೆ ಡಯಗ್ನೋಸಿಸ್ ನಿಂದ ಅಳವಡಿಸಿರುವ ಆಧುನಿಕ ತಂತ್ರಜ್ಞಾನದ ಮೂತ್ರ ಪಿಂಡ ಪರೀಕ್ಷಾ ಯಂತ್ರವನ್ನು ಲೋಕಾರ್ಪಣೆ ಮಾಡಿದರು. ಇದು ಪ್ರತಿ ಗಂಟೆಗೆ 182 ಮೂತ್ರಪಿಂಡ ಪರೀಕ್ಷೆ, ರಕ್ತ ಪರೀಕ್ಷೆ , ರೋಗನಿರೋಧಕ, ರೋಗಶಾಸ್ತ್ರ ಪತ್ತೆ ಮಾಡುವ ಸಾಮರ್ಥ್ಯ ಹೊಂದಿದ್ದು, ಸಂಚಾರಿ ಆಂಬ್ಯುಲೆನ್ಸ್ ಮೂಲಕ ಹಳ್ಳಿಹಳ್ಳಿಗಳಲ್ಲಿ ಆರೋಗ್ಯ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಮೆಟ್ರೋಪಾಲಿಟನ್ ಸಾರಿಗೆ ನಿಗಮದ ಉಪಾಧ್ಯಕ್ಷ  ಎಮ್. ಆರ್.  ವೆಂಕಟೇಶ್, ಮುಖ್ಯಮಂತ್ರಿ ವಿಶೇಷಾಧಿಕಾರಿ ಶಿವರಾಜ್,  ಪ್ರಧಾನ ಕಾರ್ಯದರ್ಶಿ ಟಿ ಕೋನರೆಡ್ಡಿ, ಕರ್ನಾಟಕ ರಾಜ್ಯ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷ  ವಿ. ವೆಂಕಟಸ್ವಾಮಿ, ಕಾರ್ಯದರ್ಶಿ ಎ.ವಿ. ನಾರಾಯಣಸ್ವಾಮಿ, ಖಜಾಂಚಿ ಕೆ ಸುರೇಶ್, ಶಿವಮೂರ್ತಿ ಅವರು  ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು