News Karnataka Kannada
Thursday, May 02 2024
ಬೆಂಗಳೂರು

ಪ್ರತಿ ಜಿಲ್ಲೆಗೊಂದು ಇಎಸ್‌ಐ ಆಸ್ಪತ್ರೆ: ಹೆಬ್ಬಾರ್

Shivaram Hebbar
Photo Credit :

ಬೆಂಗಳೂರು: ರಾಜ್ಯದಲ್ಲಿ ಕಾರ್ಮಿಕರ ವಿಮಾ ನಿಗಮದಿಂದ (ಇಎಸ್‌ಐ) ಪ್ರತಿ ಜಿಲ್ಲೆಗೆ ಒಂದು ಸುಸಜ್ಜಿತವಾದ ಆಸ್ಪತ್ರೆಯನ್ನು ಆರಂಭಿಸುವ ಚಿಂತನೆ ನಡೆದಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದರು.

ಈಗ ಹೆಚ್ಚಿನ ಇಎಸ್‌ಐ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯಗಳಿವೆ. ಆದರೂ, ರೋಗಿಗಳನ್ನು ‘ಎಂ–ಪ್ಯಾನೆಲ್‌’ ಪಟ್ಟಿಯಲ್ಲಿರುವ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಇದರಿಂದ ಇಲಾಖೆಯು ಹೆಚ್ಚಿನ ಮೊತ್ತದ ಚಿಕಿತ್ಸಾ ವೆಚ್ಚ ಭರಿಸುತ್ತಿದೆ. ಇದನ್ನು ತಪ್ಪಿಸಲು ಪ್ರತಿ ಜಿಲ್ಲೆಯಲ್ಲೂ ಆಸ್ಪತ್ರೆ ಆರಂಭಿಸುವ ಯೋಚನೆ ಇದೆ ಎಂದರು.

ಸದ್ಯ 180 ಇಎಸ್‌ಐ ಚಿಕಿತ್ಸಾಲಯಗಳಿವೆ. ಅವುಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಮುಂದಿನ ವಾರ ತಾವು ದೆಹಲಿಗೆ ತೆರಳಲಿದ್ದು, ಹೊಸ ಇಎಸ್‌ಐ ಆಸ್ಪತ್ರೆಗಳ ಆರಂಭಕ್ಕೆ ನೆರವು ಕೋರಿ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು