ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ದಾಖಲಾತಿ ದಿನಾಂಕವನ್ನು ವಿಶೇಷ ದಂಡ ಶುಲ್ಕದೊಂದಿಗೆ ಅಕ್ಟೋಬರ್ 23 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
2021-22 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ದಾಖಲಾತಿಗೆ ಸಂಬಂಧಿಸಿದಂತೆ ದಿನಾಂಕವನ್ನು 05-10-2021 ರವರೆಗೆ ವಿಸ್ತರಿಸಲಾಗಿತ್ತು. ಪೋಷಕರ ಮನವಿ ಮೇರೆಗೆ ಪ್ರಥಮ ಪಿಯುಸಿ ತರಗತಿಗಳಿಗೆ ದಾಖಲಾತಿ ದಿನಾಂಕವನ್ನು ವಿಶೇಷ ದಂಡ ಶುಲ್ಕದೊಂದಿಗೆ ದಿನಾಂಕ 19-10-2021 ರವರೆಗೆ ವಿಸ್ತರಿಸಲಾಗಿತ್ತು. ಮುಂದುವರೆದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಥಮ ಪಿಯುಸಿ ತರಗತಿಗಳಿಗೆ ದಾಖಲಾತಿ ದಿನಾಂಕವನ್ನು ವಿಶೇಷ ದಂಡ ಶುಲ್ಕದೊಂದಿಗೆ 23-10-2021 ರವರೆಗೆ ವಿಸ್ತರಿಸಿ ಆದೇಶಿಸಿದೆ.