ಪ್ರಧಾನ ಮಂತ್ರಿಯವರ ರಾಜ್ಯ ಪ್ರವಾಸ: ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಜೂನ್ 20 ಹಾಗೂ 21ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕಾರ್ಯಕ್ರಮದ ವಿವರಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಸಭೆಯ ನಂತರ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ತಧಾನಿಗಳ ಭೇಟಿ ಕಾರ್ಯಕ್ರಮಕ್ಕೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಿ. ಯಾವುದೇ ರೀತಿಯ ಲೋಪಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಕಟ್ಟು ನಿಟ್ಟಿನ‌ ಸೂಚನೆ ನೀಡಿದರು. ಯೋಗ ದಿನಾಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ ಎಂದು ಹೇಳಿದ ಅವರು, ಪ್ರಧಾನಿಗಳ ಎರಡು ದಿನಗಳ ಸಿದ್ಧತೆಗಳ ಕುರಿತು ವಿವರವಾಗಿ ಚರ್ಚಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಬಿ.ಎಚ್. ಅನಿಲ್ ಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕೌಶಲ್ಯಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್. ಶ್ರೀಕರ್, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಶ್ಮಿ ಮಹೇಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

2 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

2 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

2 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

2 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

4 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

4 hours ago