News Karnataka Kannada
Sunday, May 05 2024
ಬೆಂಗಳೂರು

ಪ್ರಾದೇಶಿಕ ಭಾಷೆಯಲ್ಲಿ ಯುಪಿಎಸ್‌ಸಿ ಪರೀಕ್ಷೆ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹ

Nagabharana 28082021
Photo Credit :

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ನಡೆಸಲಿರುವ ನಾಗರಿಕ ಸೇವೆಗಳ ಪ್ರಾಥಮಿಕ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹಿಸಿದೆ.

ಈ ಬಗ್ಗೆ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವ ಬಗ್ಗೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.

‘ಪೂರ್ವಭಾವಿ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಇಲ್ಲದಿರುವುದರಿಂದ ಗ್ರಾಮೀಣ ಭಾಗದ ಪ್ರತಿಭಾನ್ವಿತ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಪೂರ್ವಭಾವಿ ಪರೀಕ್ಷೆಯು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಇರುವುದು ಸಮಸ್ಯೆಯಾಗಿದೆ. ಗೊತ್ತಿರದ ಭಾಷೆಗಳಲ್ಲಿ ಅಭ್ಯರ್ಥಿಗಳಿಗೆ ತಮ್ಮ ಸಂಪೂರ್ಣ ಸಾಮರ್ಥ್ಯ ಪ್ರದರ್ಶಿಸಲು ಸಾಧ್ಯವಾಗುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು