ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 30ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳ್ಲಲ್ಲಿ ಮಳೆಯ ಕಾಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಹಾಗೂ ಸುತ್ತಮುತ್ತ ಸಾಮಾನ್ಯವಾದ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.