ಬೆಂಗಳೂರು: ಕರ್ನಾಟಕದಲ್ಲಿ ಪರಿಸರ ವೃದ್ಧಿಗೆ ಮುಂದಿನ ಬಜೆಟ್ನಲ್ಲಿ ವಿಶೇಷ ಯೋಜನೆಯನ್ನು ರೂಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಮಲ್ಲೇಶ್ವರದ ಅರಣ್ಯ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಹಿರಿಯರು ಅರಣ್ಯ ಸಂರಕ್ಷಣೆ ಮಾಡಿದ್ದಕ್ಕೆ ಇಂದು ನಾವಿದ್ದೇವೆ.