ಬಹು-ಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‍ಫಾರ್ಮ್ ಕೂ ನಲ್ಲಿ ಖಾತೆ ತೆರೆದ ಬಿಜೆಪಿ

ಬೆಂಗಳೂರು,ನ.10 :  ಸ್ಥಳೀಯ ಜನರೊಂದಿಗೆ ಸಂವಾದ ನಡೆಸಲು ಮತ್ತು ರಾಜ್ಯದಲ್ಲಿ ಡಿಜಿಟಲ್ ಅಸ್ತಿತ್ವವನ್ನು ಬಲಪಡಿಸಲು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಕರ್ನಾಟಕ ವಿಭಾಗವು ಫೇಸ್‍ಬುಕ್, ಟ್ವಿಟ್ಟರ್ ನಂತರ ಬಹು-ಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‍ಫಾರ್ಮ್ ಕೂ ನಲ್ಲಿ ತನ್ನ ಖಾತೆ ತೆರೆದಿದೆ.

ಮೈಕ್ರೋ ಬ್ಲಾಗಿಂಗ್ ಪ್ಲಾಟ್‍ಫಾರ್ಮ್ ಕೂಗೆ ಬಿಜೆಪಿ BJP4Karnataka ಹ್ಯಾಂಡಲ್ ಮೂಲಕ ಪಕ್ಷದಿಂದ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗುತ್ತಿದೆ. ಈಗಾಗಲೇ ಸಾಕಷ್ಟು ವಿಚಾರಗಳನ್ನು ಬಿಜೆಪಿ ಕರ್ನಾಟಕ ವೇದಿಕೆಯಲ್ಲಿ ಹಂಚಿಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಜಗತ್ತಿನ ಅತ್ಯಂತ ನೆಚ್ಚಿನ ಜನನಾಯಕನಾಗಿ ಹೊರಹೊಮ್ಮಿದ್ದಾರೆ. ಜಾಗತಿಕ ನಾಯಕರ ಅನುಮೋದನೆ ರೇಟಿಂಗ್‍ನಲ್ಲಿ ಜಗತ್ತಿನಾದ್ಯಂತ ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರದ ದಿಗ್ಗಜ ನಾಯಕರ ಪೈಕಿ ಪ್ರಧಾನಿ ಮೋದಿ ಉನ್ನತ ಸ್ಥಾನದಲ್ಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ಬಿಜೆಪಿ ಕರ್ನಾಟಕ ಕೂ ಖಾತೆ ತೆರೆಯಲಾಗಿದೆ.

ಬಿಜೆಪಿ ಕರ್ನಾಟಕ ನಮ್ಮ ಬಹುಭಾಷಾ ವೇದಿಕೆಗೆ ಬಂದಿರುವುದು ಸಂತೋಷಕರ. ಇದು ಸ್ಥಳೀಯ ಭಾರತೀಯ ಭಾಷೆಗಳಲ್ಲಿ ಅಭಿವ್ಯಕ್ತಿಯನ್ನು ಶಕ್ತಗೊಳಿಸುತ್ತದೆ. ಕರ್ನಾಟಕದ ಜನರು ಈಗ ತಮ್ಮ ನೆಚ್ಚಿನ ಪಕ್ಷದೊಂದಿಗೆ ನೇರವಾಗಿ ಚರ್ಚಿಸಬಹುದಾಗಿದೆ ಮತ್ತು ಪಕ್ಷದ ಕುರಿತ ಎಲ್ಲ ಮಾಹಿತಿಯನ್ನು ಅವರ ಮಾತೃಭಾಷೆಯಲ್ಲೇ ತಿಳಿದುಕೊಳ್ಳಬಹುದಾಗಿದೆ ಎಂದು ಕೂ ವಕ್ತಾರರು ತಿಳಿಸಿದ್ದಾರೆ.

ಆ್ಯಪ್‌ ಕೂ ಸಾಕಷ್ಟು ಜನಪ್ರಿಯತೆ ಗಳಿಸಿಕೊಳ್ಳುತ್ತಿದ್ದು, ಕ್ರೀಡಾತಾರೆಯರು, ಸಿನಿಮಾ ತಾರೆಯರು ಮತ್ತು ಕ್ಷೇತ್ರಗಳಲ್ಲಿ ವ್ಯಕ್ತಿಗಳ ಜೊತೆಗೆ, ಕರ್ನಾಟಕದ ರಾಜಕೀಯ ನಾಯಕರು ಕನ್ನಡದಲ್ಲಿ ಕೂ ಮಾಡುವ ಮೂಲಕ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಕರ್ನಾಟಕ ಕಾಂಗ್ರೆಸ್ ಮತ್ತು ಜನತಾ ದಳ ಸೇರಿದಂತೆ ಈಗಾಗಲೇ ಕರ್ನಾಟಕದ ಅನೇಕ ಗಣ್ಯರು ಕೂ ಆ್ಯಪ್‌ ಪ್ರವೇಶಿಸಿದ್ದಾರೆ.

Gayathri SG

Recent Posts

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

6 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

22 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

44 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

1 hour ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

3 hours ago