ಇಂದು ಬಿಡದಿಯ ತಮ್ಮ ತೋಟದ ಮನೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಯುವಕರಿಗೆ ಉದ್ಯೋಗ ಸೃಷ್ಟಿ ಮತ್ತು ಉದ್ಯೋಗ ನೀಡುವತ್ತ ಗಮನ ಹರಿಸಬೇಕು ಎಂದಿರುವ ಕುಮಾರಸ್ವಾಮಿ, ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಜೆಡಿ(ಎಸ್) ತನ್ನ “ಮಿಷನ್ 123 ಸ್ಥಾನಗಳ” ಭಾಗವಾಗಿ ಯುವ ಶಕ್ತಿಯನ್ನು ಸಜ್ಜುಗೊಳಿಸುವತ್ತ ಗಮನ ಹರಿಸುತ್ತಿದೆ ಎಂದು ಹೇಳಿದರು.
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿತ್ತು, ಆದರೆ ನಿರುದ್ಯೋಗದ ದೊಡ್ಡ ಬಿಕ್ಕಟ್ಟನ್ನು ಸೃಷ್ಟಿಸಿದೆ ಎಂದು ವಾಗ್ದಾಳಿ ನಡೆಸಿದರು.