ಬಿಟ್‌ಕಾಯಿನ್ ಹಗರಣ : ರಾಜ್ಯ, ಕೇಂದ್ರ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ

ಬೆಂಗಳೂರು: ಬಹುಕೋಟಿ ಬಿಟ್‌ಕಾಯಿನ್ ಹಗರಣದಲ್ಲಿ ಭಾಗಿಯಾಗಿರುವ ರಾಜ್ಯದ ಆಡಳಿತ ಪಕ್ಷದ ಇಬ್ಬರು ಪ್ರಭಾವಿ ನಾಯಕರ ಬಗ್ಗೆ ಪ್ರಧಾನಮಂತ್ರಿಗಳ ಕಚೇರಿ ವರದಿ ಕೇಳಿರುವುದರಿಂದ ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಗುರುವಾರ ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರದ ಭವಿಷ್ಯದ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪ್ರಧಾನಮಂತ್ರಿಗಳ ಕಚೇರಿ ವರದಿ ಕೇಳಿ ಬಳಿಕ ಸಿಸಿಬಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಿತ್ತು. ಇದೀಗ ಮತ್ತಷ್ಟು ಜನರ ತಲೆದಂಡವಾಗಬಹುದು ಎಂದು ಹೇಳಿದ್ದಾರೆ. ವಿರೋಧ ಪಕ್ಷವಾಗಿ ನಾವು ಹಗರಣ ಸಂಬಂಧ ನ್ಯಾಯಾಂಗ ತನಿಖೆಗೆ ಆಗ್ರಹಿಸುತ್ತಿದ್ದೇವೆ. ರಾಜ್ಯ ಮತ್ತು ಕೇಂದ್ರೀಯ ಸಂಸ್ಥೆಗಳ ಮೇಲೆ ನಮಗೆ ನಂಬಿಕೆಯಿಲ್ಲ. ನ್ಯಾಯಾಲಯ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಿದ್ದೇ ಆದರೆ, ಸತ್ಯಾ ಸತ್ಯತೆಗಳು ಬಹಿರಂಗಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಮಾಜಿ ಗೃಹ ಸಚಿವನಾಗಿದ್ದ ನನಗೂ ಹಗರಣದ ಬಗ್ಗೆ ಮಾಹಿತಿ ಇದೆ. ಸತ್ಯಾಂಶಗಳು ಬಹಿರಂಗೊಳ್ಳಬೇಕು. ಬೊಮ್ಮಾಯಿ ಸರ್ಕಾರದ ತಲೆ ಅಲ್ಲದೇ ಹೋದರು, ಕೆಲ ಬಿಜೆಪಿ ನಾಯಕರ ತಲೆದಂಡವಂತೂ ಆಗಲಿದೆ ಎಂದಿದ್ದಾರೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಸಾಕಷ್ಟು ಪ್ರಭಾವಿ ವ್ಯಕ್ತಿಗಳು ಹಗರಣದಲ್ಲಿ ಭಾಗಿಯಾಗಿದ್ದಾರೆ. ರಾಜಕೀಯ ನಾಯಕರು, ಉದ್ಯಮಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ. ಈ ಕುರಿತ ಮಾಹಿತಿ ನನಗೆ ಸಾಕಷ್ಟು ಆಘಾತವನ್ನೇ ತಂದಿದೆ ಎಂದು ಹೇಳಿದ್ದಾರೆ

Sneha Gowda

Recent Posts

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

11 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

23 mins ago

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

8 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

8 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

8 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

9 hours ago