ಬೆಂಗಳೂರು

ಬಿ.ಎಸ್. ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

ಬೆಂಗಳೂರು: ಲೋಕಸಭೆಯ ಮಾದರಿಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ರಾಜ್ಯ ವಿಧಾನಸಭೆಯಲ್ಲಿ ಪ್ರಸ್ತುತ ಸಾಲಿನಿಂದ ನೀಡಲು ನಿರ್ಧರಿಸಿದ್ದು, ಮೊದಲ ಸಾಲಿನ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸದನದ ಹಿರಿಯ ಶಾಸಕ ಬಿ.ಎಸ್.ಯಡಿಯೂರಪ್ಪ ಅವರು ಭಾಜನರಾಗಿದ್ದಾರೆ.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಇಂದು ವಿಧಾನಸಭೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಜಾಪ್ರಬುತ್ವ ಸಂಸದೀಯ ಮೌಲ್ಯಗಳ ರಕ್ಷಣೆ  ಕುರಿತು ವಿಧಾನಮಂಡಲದ ಉಭಯ ಸದನಗಳ ಉದ್ದೇಶಿಸಿ ಮಾತನಾಡಲು ಆಗಮಿಸಿದ್ದ ಲೋಕಸಭಾ ಸಭಾಧ್ಯಕ್ಷರಾದ ಓಂ ಬಿರ್ಲಾ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಕುರಿತು ಮಾತನಾಡಿದ ವಿಧಾನ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಅವರು ಸಂಸದೀಯ ಕಾರ್ಯಚಟುವಟಿಕೆಯನ್ನು ಪ್ರೋತ್ಸಾಹಿಸಲು ಜೀವಮಾನದಲ್ಲಿ ಒಮ್ಮೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುವುದು ಎಂದು ತಿಳಿಸಿದರು.

ವಿಧಾನ ಸಭೆಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲು ನಿರ್ಧರಿಸಿದ್ದು, ಮಂತ್ರಿಗಳಾದವರು ಈ ಪ್ರಶಸ್ತಿಗೆ ಅನ್ವಯಿಸುವುದಿಲ್ಲ, ಕೇವಲ ಶಾಸಕರನ್ನು ಮಾತ್ರ ಪರಿಗಣಿಸಲಾಗುತ್ತದೆ. ಇಂತಹ ಮೊದಲ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಬಿ.ಎಸ್. ಯಡಿಯೂರಪ್ಪ ಅವರು ಆಯ್ಕೆಯಾಗಿದ್ದು ಪ್ರಶಸ್ತಿಯ ಹಿರಿಮೆ ಹೆಚ್ಚಿಸಿದೆ ಎಂದು ಹೇಳಿದರು.

ಬಿ.ಎಸ್. ಯಡಿಯೂರಪ್ಪ ಇವರು ರೈತನಾಯಕರಾಗಿ, ಜನತೆಯ ಆಗುಹೋಗುಗಳಿಗೆ ಸ್ಪಂದಿಸಿದ, ಸಂಸದೀಯ ವ್ಯವಸ್ಥೆಯಲ್ಲಿ 8 ಬಾರಿ ಗೆದ್ದು ಬಂದಿದ್ದಾರೆ. ರೈತರ ಸಾಲ ಮನ್ನಾ ಇನ್ನಿತರ ಅತ್ಯುತ್ತಮ ಕೆಲಸವನ್ನು ನಿರ್ವಹಿಸಿರುತ್ತಾರೆ. ಉಪ ಮುಖ್ಯಮಂತ್ರಿಯಾಗಿ, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಸದನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಜನಸೇವೆಯನ್ನು ಜನಾರ್ಧನ ಸೇವೆ ಎಂಬಂತೆ ಮಾಡಿದ್ದಾರೆ ಎಂದರು.

ಸಂಸದೀಯ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕೆಂದು ಸಮಿತಿ ರಚನೆಗೊಂಡಿತು. ಸಮಿತಿಯ ಅಧ್ಯಕ್ಷರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ, ಸದಸ್ಯರುಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಸಚಿವ  ಜೆ.ಸಿ. ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರುಗಳನ್ನೊಳಗೊಂಡ ಸಮಿತಿಯು ಬಿ.ಎಸ್. ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರುಗಳು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ವಿಧಾನಸಭೆ ಹಾಗೂ ಪರಿಷತ್ತಿನ ಸದಸ್ಯರುಗಳು ಮತ್ತು ಲೋಕಸಭಾ ಸದಸ್ಯರುಗಳು ಉಪಸ್ಥಿತರಿದ್ದರು.

Raksha Deshpande

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

20 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

43 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

59 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago