ಬಿ.ವೈ ವಿಜಯೇಂದ್ರ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಮೇಲ್ಮನೆ ಸದಸ್ಯ ಸ್ಥಾನ ಕೊಡಲು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಅಭ್ಯರ್ಥಿಯಾಗಿ ವಿಜಯೇಂದ್ರ ಹೆಸರನ್ನು ಅಂತಿಮಗೊಳಿಸಲಾಗುವುದು ಎನ್ನಲಾಗ್ತಿದೆ.

ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪರಿಷತ್ ಚುನಾವಣಾ ಅಭ್ಯರ್ಥಿಯಾಗಿ ನಾಲ್ವರ ಹೆಸರು ಚರ್ಚೆಯಲ್ಲಿದೆ. ಬಿ.ವೈ. ವಿಜಯೇಂದ್ರ, ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ ಹಾಗೂ ನಿರ್ಮಲ ಕುಮಾರ್ ಸುರಾನ ಹೆಸರು ಚರ್ಚೆಗೆ ಬರಲಿದೆ. ಈ‌ ನಾಲ್ವರ ಹೆಸರನ್ನೇ ಕೇಂದ್ರಕ್ಕೆ ಶಿಫಾರಸು ಮಾಡುವುದು ಬಹುತೇಕ ಖಚಿತ ಎನ್ನಲಾಗ್ತಿದೆ.

ವಿಜಯೇಂದ್ರಗೆ ಮಂತ್ರಿಪಟ್ಟ ?: ಮೇಲ್ಮನೆ ಸದಸ್ಯರಾಗಿ ಆಯ್ಕೆ ಮಾಡುವ ಮೂಲಕ ಸಂಪುಟ ಪುನಾರಚನೆ ವೇಳೆ ವಿಜಯೇಂದ್ರಗೆ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಗಲಿದೆ ಎಂಬ ಮಾತು ಬಲವಾಗಿ ಕೇಳಿ ಬರುತ್ತಿದೆ. 2023ರ ಚುನಾವಣಾ ಹಿತದೃಷ್ಟಿಯಿಂದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನ ಸಂಪೂರ್ಣವಾಗಿ ಚುನಾವಣೆಗೆ ತೊಡಗಿಸಿಕೊಳ್ಳಲು ಹಾಗೂ ಲಿಂಗಾಯತ ಯುವ ಮತ ಬ್ಯಾಂಕ್ ಸೆಳೆಯಲು ಬಿ.ವೈ.ವಿಜಯೇಂದ್ರಗೆ ಮಂತ್ರಿಪಟ್ಟ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಹೈ ಕಮಾಂಡ್ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದ್ದಾರೆ. ಪುತ್ರನಿಗೆ ಮಂತ್ರಿ ಸ್ಥಾನ ನೀಡುವಂತೆ ಬಿಎಸ್​ವೈ ಒತ್ತಡ ಹಾಕುತ್ತಾ ಬಂದಿದ್ದರು. ಆದರೆ, ಇದೇ ವೇಳೆ ಹೈಕಮಾಂಡ್ ಕೆಲ ಷರತ್ತುಗಳನ್ನೂ ಹಾಕಿದೆ. ಮಂತ್ರಿ ಮಾಡಿದರೆ ಖಾತೆಗಾಗಿ ಲಾಬಿ ಮಾಡುವಂತಿಲ್ಲ. ಇಂತಹದ್ದೇ ಖಾತೆ ಬೇಕೆಂದು ಪಟ್ಟು ಹಿಡಿಯುವಂತಿಲ್ಲ. ಕೊಟ್ಟ ಖಾತೆ ನಿಭಾಯಿಸಬೇಕು ಎಂದು ತಿಳಿಸಿದೆ ಎನ್ನಲಾಗ್ತಿದೆ.

Ashika S

Recent Posts

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

19 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

32 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

58 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

1 hour ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

2 hours ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

2 hours ago