ಬೆಂಗಳೂರು: ಸ್ಯಾಂಡಲ್ ವುಡ್ ನ ಹಾಸ್ಯನಟ ಬುಲೆಟ್ ಪ್ರಕಾಶ್ ಪುತ್ರ ಹಾಗೂ ಉದಯೋನ್ಮುಖ ನಟ ರಕ್ಷಕ್ ಸೇನಾ ಮೇಲೆ ಕೆಲ ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಕೇಳಿ ಬಂದಿದೆ. ಮಂಗಳವಾರ ರಾತ್ರಿ 9 ಗಂಟೆಗೆ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್, ಜಿಮ್ನಿಂದ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಹೆಬ್ಬಾಳ ಬಳಿ ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ.
ಹೆಬ್ಬಾಳ ಪ್ಲೈ ಓವರ್ ಬಳಿ ಮಂಗಳಮುಖಿಯರು ರಕ್ಷಕ್ ಬ್ಯಾಗ್ ಹಿಡಿದು ಎಳೆದಿದ್ದು, ಪರಿಣಾಮ ರಕ್ಷಕ್ ಬೈಕ್ನಿಂದ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ರಕ್ಷಕ್ ಕಾಲಿಗೆ ತರಚಿದ ಗಾಯಗಳಾಗಿವೆ. ಅಲ್ಲದೇ, ಮಂಗಳಮುಖಿಯರ ದಾಳಿಯಿಂದ ತಪ್ಪಿಸಿಕೊಳ್ಳಲು ರಕ್ಷಕ್ ಫ್ಲೈ ಓವರ್ ಮೇಲೆಯೇ ಬೈಕ್ ಬಿಟ್ಟು ಓಡಿಹೋಗಿದ್ದಾರೆ. ಬಳಿಕ ಪೊಲೀಸರ ಸಹಾಯದಿಂದ ಬೈಕ್ ವಾಪಸ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ.