ಬೆಂಗಳೂರು

ಬೆಂಗಳೂರಿನಲ್ಲಿ ಆಗಸ್ಟ್‌ 15ರವರೆಗೆ ವಾರಾಂತ್ಯ ಕರ್ಫ್ಯೂ ಇಲ್ಲ: ಅಶೋಕ್

ಬೆಂಗಳೂರು: ಬೆಂಗಳೂರು ಬೃಹತ್‌ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಗಸ್ಟ್‌ 15ರವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸುವುದಿಲ್ಲ. ನಂತರ ಪರಿಸ್ಥಿತಿ ನೋಡಿಕೊಂಡು ಅಗತ್ಯ ಬಿದ್ದರೆ ಮಾತ್ರ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಬಿಗಿಗೊಳಿಸುತ್ತೇವೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.

ರಾಜ್ಯದಲ್ಲಿ ಸೋಂಕು ಪತ್ತೆ ದರ ಶೇ 2ಕ್ಕಿಂತ ಹೆಚ್ಚು ಇರುವ ಕಡೆ ಮಾತ್ರ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ. ನಗರದಲ್ಲಿ ಸೋಂಕು ಪತ್ತೆ ದರ ಶೇ 0.9 ರಿಂದ 0.64ಕ್ಕೆ ಇಳಿಕೆ ಆಗಿದೆ. ಇಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ 179 ಮಂದಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 479 ಮಂದಿ ಮಾತ್ರ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಬಿಬಿಎಂಪಿಯ ಹೊರಗಿನ ಪ್ರದೇಶಗಳಲ್ಲಿ 68 ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಈ ತಿಂಗಳಲ್ಲಿ ಶ್ರಾವಣ ಶನಿವಾರವೂ ಸೇರಿದಂತೆ ನಾಲ್ಕೈದು ಹಬ್ಬಗಳು ಬರುತ್ತಿವೆ. ಈ ಸಂದರ್ಭದಲ್ಲಿ ನಗರದ ಎಲ್ಲ ದೇವಸ್ಥಾನಗಳಲ್ಲಿ ಪೂಜೆಗಳು, ಹಬ್ಬದೂಟ ಜಾಸ್ತಿ ಆಗುತ್ತವೆ. ದೇವಸ್ಥಾನಗಳಲ್ಲಿ ಕೋವಿಡ್ ನಿಯಂತ್ರಣ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಿದ್ದೇವೆ. ಭಕ್ತರೂ ಮಾಸ್ಕ್‌ ಧರಿಸುವ ಹಾಗೂ ಅಂತರ ಕಾಪಾಡುವ ಮೂಲಕ ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು.

Sampriya YK

Recent Posts

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

1 min ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

17 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

29 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago