News Karnataka Kannada
Monday, April 29 2024
ಬೆಂಗಳೂರು

ಬೆಂಗಳೂರಿನಲ್ಲಿ ಇಳಿಮುಖವಾದ ಲಸಿಕೆ ವಿತರಣೆ

Covid
Photo Credit :

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿಯೂ ಕೊರೋನಾ ಕೇಸ್​​ಗಳು ಕಡಿಮೆಯಾಗುತ್ತಿವೆ. ಆದರೆ ರಾಜಧಾನಿಯಲ್ಲಿ ಲಸಿಕೆ ವಿತರಣೆಯಲ್ಲಿ ಏರಿಕೆಯಾಗಿಲ್ಲ. ಬದಲಿಗೆ ಲಸಿಕೆ ಕೊರತೆ ಎದುರಾಗಿದೆ. ಹೌದು, ಕಳೆದ 10 ದಿನಗಳಲ್ಲಿ ಲಸಿಕೆ ವಿತರಣೆಯಲ್ಲಿ ಇಳಿಮುಖವಾಗಿದೆ. ಹೀಗಾಗಿ ಬಿಬಿಎಂಪಿ ಲಸಿಕೆ ಕೊರತೆಯನ್ನು ಎದುರಿಸುತ್ತಿದೆ.
ಬಿಬಿಎಂಪಿ ಪ್ರತಿನಿತ್ಯ ಒಂದು ಲಕ್ಷ ಲಸಿಕೆ ಹಾಕುವ ಗುರಿ‌ ಹೊಂದಿದೆ. ಆದರೆ ಆ.12ರಂದು ಅತ್ಯಂತ ಕಡಿಮೆ ಅಂದರೆ 28,906 ಲಸಿಕೆಯನ್ನು ವಿತರಣೆ ಮಾಡಲಾಗಿದೆ. ಆ.7ರಂದು 88,385 ಲಸಿಕೆ ಹಾಕಲಾಗಿದ್ದು, ಇದೇ ಅತಿ ಹೆಚ್ಚು ಎಂದು ತಿಳಿದು ಬಂದಿದೆ. ಉಳಿದ 9 ದಿನಗಳಲ್ಲಿ ಸರಾಸರಿ 40-50 ಸಾವಿರ ಲಸಿಕೆ‌ ಹಾಕಲಾಗಿದೆ. ರಾಜಧಾನಿಯಲ್ಲಿ ನಿತ್ಯ 50 ಸಾವಿರಕ್ಕೂ ಹೆಚ್ಚು ಲಸಿಕೆ ವಿತರಣೆ ಆಗುತಿದ್ದುದು ಈಗ 40 ಸಾವಿರ ಆಸು ಪಾಸಿನಲ್ಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು