ಬೆಂಗಳೂರು: ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯ ತಿಗಳರಪಾಳ್ಯದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ನೇಣು ಹಾಕಿಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳೀಯ ಪತ್ರಿಕೆಯೊಂದರ ಸಂಪಾದಕರ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡವರು. ಅವರ ಕುಟುಂಬದ ಭಾರತಿ (50), ಸಿಂಚನ(33), ಸಿಂಧುರಾಣಿ (30), ಮಧು ಸಾಗರ(27) ಆತ್ಮಹತ್ಯೆ ಮಾಡಿಕೊಂಡವರು. ಜತೆಗೆ ಒಂಭತ್ತು ತಿಂಗಳು ಮಗುವನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ಐದು ದಿನದ ಹಿಂದೆಯೆ ಮನೆಯಲ್ಲಿ ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಮನೆಯಲ್ಲಿ ಒಟ್ಟು 6 ಮಂದಿ ಇದ್ದರು. ಕಳೆದ ಐದು ದಿನಗಳಿಂದ 3 ವರ್ಷದ ಒಂದು ಮಗು ಮಾತ್ರ ಬದುಕಿತ್ತು. ಆಹಾರವಿಲ್ಲದೆ ನಿತ್ರಾಣವಾಗಿತ್ತು. ಸದ್ಯ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.