News Karnataka Kannada
Sunday, May 05 2024
ಬೆಂಗಳೂರು

ಬೆಂಗಳೂರಿನಲ್ಲಿ ಕಪ್ಪು ಶಿಲೀಂದ್ರ ಸೋಂಕಿನಲ್ಲಿ ಹೆಚ್ಚಳ: 17 ಮಂದಿ ಸಾವು

Blackfungus 12072021
Photo Credit :

ಬೆಂಗಳೂರು: ಬೆಂಗಳೂರು ನಗರದಲ್ಲಿ ಕಪ್ಪು ಶಿಲೀಂಧ್ರ ಸೋಂಕಿನ ತೀವ್ರತೆಗೆ ಹೆಚ್ಚಳವಾಗಿದೆ. ಒಂದು ವಾರದಲ್ಲಿ ಈ ಸೋಂಕಿನಿಂದ 17 ಮಂದಿ ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 104ಕ್ಕೆ ಏರಿಕೆ ಕಂಡಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೌರಿಂಗ್ ಹಾಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಲಾ ಎರಡು ಶಿಲೀಂಧ್ರ ಸೋಂಕು ಪ್ರಕರಣಗಳು ವರದಿಯಾಗಿವೆ. ಏಳು ದಿನಗಳಲ್ಲಿ 52 ಮಂದಿಗೆ ಸೋಂಕು ತಗುಲಿದೆ. ಈವರೆಗೆ ಈ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 1,120ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈವರೆಗೆ 208 ಪ್ರಕರಣಗಳು ವರದಿಯಾಗಿವೆ. ಅದೇ ರೀತಿ, ಬೌರಿಂಗ್ ಆಸ್ಪತ್ರೆಯಲ್ಲಿ 353, ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ನಾಲ್ಕು ಹಾಗೂ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಒಂದು ಪ್ರಕರಣ ದೃಢಪಟ್ಟಿದೆ. ಕಪ್ಪು ಶಿಲೀಂಧ್ರ ಸೋಂಕಿತರಲ್ಲಿ ಈವರೆಗೆ 556 ಮಂದಿ ಸರ್ಕಾರಿ ವ್ಯವಸ್ಥೆಯಡಿ ದಾಖಲಾಗಿದ್ದಾರೆ. ಇನ್ನುಳಿದವರು ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ ಈವರೆಗೆ 3,511 ಕಪ್ಪು ಶಿಲೀಂಧ್ರ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 303 ಮಂದಿ ಮೃತಪಟ್ಟಿದ್ದಾರೆ ಎಂದು ಇಲಾಖಾ ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು