News Karnataka Kannada
Sunday, April 28 2024
ಬೆಂಗಳೂರು

ಬೆಂಗಳೂರಿನಲ್ಲಿ ಕೋರೊನಾ ಸೋಂಕಿನಿಂದ ಸಾವು ಶೂನ್ಯ

Corona World 10072021
Photo Credit :

ಬೆಂಗಳೂರು, ; ರಾಜ್ಯದಲ್ಲಿ ಕೊರೊನಾ ಸೋಂಕು ಸಂಖ್ಯೆ ಮತ್ತು ಸಾವಿನ ಸಂಖ್ಯೆ ಇಳಿಕೆಯಾಗಿದೆ.ಬೆಂಗಳೂರಿನಲ್ಲಿ ಮತ್ತೊಮ್ಮೆ ಇಂದು ಸೋಂಕಿನಿಂದ ಯಾವುದೇ ಸಾವಿನ ವರದಿ ದೃಢಪಟ್ಟಿಲ್ಲ
ಬಾಗಲಕೋಟೆ,ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ.ರಾಜ್ಯದಲ್ಲಿ ಕೊರೊನಾ ಸೋಂಕಿನ ಶೇಕಡವಾರು ಪ್ರಮಾಣ ಶೇ.0.66 ಇಳಿಕೆಯಾಗಿದೆ.ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೇ 1.05 ಕ್ಕೆ ಇಳಿಕೆಯಾಗಿದೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,897 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.ರಾಜ್ಯದಲ್ಲಿಂದು 1,229 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 13 ಮಂದಿ ಸಾವನ್ನಪ್ಪಿದ್ದಾರೆ ಜೊತೆ 1,289 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.ಹೊಸದಾಗಿ ದಾಖಲಾಗಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,45,993 ಕ್ಕೆ ಏರಿಕೆಯಾಗಿದೆ ಜೊತೆಗೆ ಚೇತರಿಸಿಕೊಂಡವರ ಸಂಖ್ಯೆ 28,89,809 ಕ್ಕೆ ಹೆಚ್ಚಳವಾಗಿದೆ.ಸೋಂಕಿನಿಂದ ಒಟ್ಟಾರೆ ಸಾವನ್ನಪ್ಪಿದವರ ಸಂಖ್ಯೆ 37,261ಕ್ಕೆ ಹೆಚ್ಚಳವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಇಳಿಕೆಯಾಗಿದೆ .ಇಂದು 310 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು .ಜೊತೆಗೆ ,329 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,83,642 ಮಂದಿ್ಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ.ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ 4,30,15,998 ಕ್ಕೆ ಹೆಚ್ಚಳವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು