ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ ಪ್ರಕರಣ ಹೆಚ್ಚಳ

ಬೆಂಗಳೂರು:ಬೆಂಗಳೂರು ನಗರದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸೊಳ್ಳೆಗಳ ಉತ್ಪತ್ತಿ ಜಾಸ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಡೆಂಗ್ಯೂ ಹಾಗೂ ಚಿಕೂನ್‌ಗುನ್ಯಾ ಪ್ರಕರಣಗಳ ಸಂಖ್ಯೆ 1 ಸಾವಿರ ಗಡಿ ದಾಟಿದೆ.ಕಳೆದ ಅಕ್ಟೋಬರ್ ತಿಂಗಳ 15 ದಿನಗಳಲ್ಲಿ 1,048 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

ಈ ಪೈಕಿ ಪೂರ್ವ ವಲಯದಲ್ಲಿ ಅತಿಹೆಚ್ಚು 401 ಮಂದಿಯಲ್ಲಿ ಈ ಕಾಯಿಲೆ ಪತ್ತೆಯಾಗಿದೆ.ಮತ್ತೊಂದೆಡೆ 1,434 ಜನರನ್ನು ಚಿಕೂನ್ ಗುನ್ಯಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 53 ಮಂದಿಯಲ್ಲಿ ರೋಗ ದೃಢಪಟ್ಟಿದೆ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಡೆಂಗ್ಯೂ ಜ್ವರ ತಡೆಗಾಗಿ ಮಳೆ ಅಥವಾ ಇತರೆ ಸಿಂಪಡಣೆ ಮಾಡಿದ ನೀರು ಎಲ್ಲಿಯೂ ನಿಲ್ಲದಂತೆ ಕ್ರಮವಹಿಸಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ಜಾಗೃತಿ ವಹಿಸಬೇಕು. ರೋಗಲಕ್ಷಣಗಳು ಕಂಡುಬಂದಲ್ಲಿ ಶೀಘ್ರ ತಪಾಸಣೆ ಮಾಡಿಸಿಕೊಳ್ಳಬೇಕು.

ಸೊಳ್ಳೆ ನಾಶಕ್ಕಾಗಿ ಬೆಂಗಳೂರು ಮಹಾನಗರ ಪಾಲಿಕೆಯಿಂದ ಆಯಂಟಿ ಲಾರ್ವಾ ಸಿಂಪಡಣೆ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ. ತ್ರಿಲೋಕ್‌ಚಂದ್ರ ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲೂ ಗರಿಷ್ಠ ಡೆಂಗ್ಯೂ ಪ್ರಕರಣ

ಸದ್ಯ ವಾಯು ಮಾಲಿನ್ಯದಿಂದ ಉಸಿರುಗಟ್ಟಿಸುವ ವಾತಾವರಣವಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೀಗ ಮತ್ತೊಮ್ಮೆ ಡೆಂಗ್ಯೂ ಜ್ವರ ಆತಂಕ ಎದುರಾಗಿದೆ. ಕಳೆದ ಐದು ವರ್ಷಗಳಲ್ಲೇ ಗರಿಷ್ಠ ಎಂಬಷ್ಟು ಡೆಂಗ್ಯೂ ಪ್ರಕರಣ ವರದಿಯಾಗದಿದ್ದು, ವಾಯುಮಾಲಿನ್ಯದ ಜತೆಗೆ ಜ್ವರ ಕೂಡ ಕಾಡುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ.

ಪ್ರಸಕ್ತ ವರ್ಷ ದೆಹಲಿಯಲ್ಲಿ 5,270 ಡೆಂಗ್ಯೂ ಪ್ರಕರಣಗಳು ವರದಿಯಾಗಿರುವುದು ಕಳೆದ ಸೋಮವಾರದ ವರದಿಯಲ್ಲಿ ಕಂಡುಬಂದಿದೆ. ಅದರಲ್ಲೂ ಕಳೆದ ಒಂದು ವಾರದಲ್ಲೇ 2,570 ಪ್ರಕರಣಗಳು ಕಂಡುಬಂದಿವೆ. ಕಳೆದ ಐದು ವರ್ಷಗಳಲ್ಲಿ ದಾಖಲೆಯ ಡೆಂಗ್ಯೂ ಪ್ರಕರಣಗಳು ಕಂಡುಬಂದಿರುವುದು ಸಾರ್ವಜನಿಕರಲ್ಲಿ ಭಯದ ವಾತಾವರಣ ಹುಟ್ಟಿಸಿದೆ.

ದೆಹಲಿಯಲ್ಲಿ 2016ರಲ್ಲಿ 4431, 2017ರಲ್ಲಿ 4726, 2018ರಲ್ಲಿ 2798, 2019ರಲ್ಲಿ 2036 ಮತ್ತು 2020ರಲ್ಲಿ 1072 ಡೆಂಘ ಪ್ರಕರಣಗಳು ವರದಿಯಾಗಿದ್ದವು. ಆದರೆ ಈ ವರ್ಷ ಏಕಾಏಕಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ, ಐದು ಸಾವಿರದ ಗಡಿಯನ್ನು ದಾಟಿರುವುದು ಕೊರೊನಾ ಸೋಂಕಿನ ನಂತರ ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಿದೆ.

Swathi MG

Recent Posts

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

26 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

32 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

44 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

50 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

54 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

1 hour ago