ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ 8 ಗಂಟೆಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಇಂದೂ ಕೂಡ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಇಂದು ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೊಡಗಿನಲ್ಲಿ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.