News Karnataka Kannada
Monday, May 06 2024
ಬೆಂಗಳೂರು

ಬೆಂಗಳೂರಿನಲ್ಲಿ ನೂರಾರು ಮಕ್ಕಳಿಗೆ ಕೊರೋನ ಸೋಂಕು

Covid
Photo Credit :

ಬೆಂಗಳೂರು, – ಕೊರೊನಾ ಮೂರನೆ ಅಲೆ ಮಕ್ಕಳ ಆರೋಗ್ಯದ ಮೇಲೆ ಭಾರೀ ದುಷ್ಪರಿ ಣಾಮ ಬೀರುವ ಸಾಧ್ಯತೆ ಇದೆ ಎಂಬ ತಜ್ಞರ ಎಚ್ಚರಿಕೆ ಬೆನ್ನಲ್ಲೇ ನಗರದಲ್ಲಿ ನೂರಾರು ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಕಳೆದ ಐದು ದಿನಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 240ಕ್ಕೂ ಹೆಚ್ಚು ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವುದು ಈ ಆತಂಕಕ್ಕೆ ಕಾರಣವಾಗಿದೆ.
ಆಗಸ್ಟ್ 6ರಿಂದ ನಿನ್ನೆಯವರೆಗೆ 242 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. 123 ಹೆಣ್ಣು ಮಕ್ಕಳು ಹಾಗೂ 119 ಗಂಡು ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಆಗಸ್ಟ್ 6ರಂದು 34 ಹೆಣ್ಣು, 33 ಗಂಡು ಮಕ್ಕಳಿಗೆ, 7ರಂದು 30 ಹೆಣ್ಣು, 20 ಗಂಡು, 8ರಂದು 20 ಹೆಣ್ಣು, 18 ಗಂಡು, 9ರಂದು 19 ಹೆಣ್ಣು, 23 ಗಂಡು ಹಾಗೂ ನಿನ್ನೆ 20 ಹೆಣ್ಣು ಮಕ್ಕಳು ಹಾಗೂ 25 ಗಂಡು ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದೆ.
ಅದರಲ್ಲೂ ಮುಖ್ಯವಾಗಿ 15 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ಪತ್ತೆಯಾಗುತ್ತಿರುವ ಸೋಂಕಿತರ ಪೈಕಿ ಶೇ.12ರಷ್ಟು ಮಕ್ಕಳು ಸೋಂಕಿಗೆ ತುತ್ತಾಗುತ್ತಿದ್ದಾರೆ. ಸರ್ಕಾರ ಶಾಲಾ-ಕಾಲೇಜು ಆರಂಭಿಸಲು ತೀರ್ಮಾನಿಸಿರುವ ಬೆನ್ನಲ್ಲೇ ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಆಕ್ಟೀವ್ ಕೇಸ್‍ಗಳ ಹೆಚ್ಚಳ: 27 ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಆಕ್ಟೀವ್ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ಕಂಡುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು