ಬೆಂಗಳೂರು : ಬೆಂಗಳೂರಿನಲ್ಲಿ ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಬಡವರಿಂದ ಕಡಿಮೆ ಹಣಕ್ಕೆ ಮಕ್ಕಳನ್ನು ಖರೀದಿ ಮಾಡಿ, ಮಾರಾಟ ಮಾಡುತ್ತಿದ್ದರು. ಮಕ್ಕಳಿಲ್ಲದ ಪೋಷಕರನ್ನು ಟಾರ್ಗೆಟ್ ಮಾಡುತ್ತಿದ್ದ ಗ್ಯಾಂಗ್ ಅವರಿಗೆ ಹೆಚ್ಚಿಗೆ ಹಣಕ್ಕೆ ಮಕ್ಕಳನ್ನು ಮಾರಾಟ ಮಾಡುತ್ತಿದ್ದರು.
ಎರಡರಿಂದ ಮೂರು ಲಕ್ಷಕ್ಕೆ ಮಕ್ಕಳನ್ನು ಮಾರಾಟ ಮಾಡಲಾಗುತ್ತಿತ್ತು. ದೇವಿಷಣ್ಮುಗಮ್ಮ, ಮಹೇಶ್ ಕುಮಾರ್, ಜನಾರ್ಧನ್, ರಂಜನಾ ದೇವಿಪ್ರಸಾದ್, ಧನಲಕ್ಷ್ಮಿ ಬಂಧಿತ ಆರೋಪಿಗಳು. ಪೊಲೀಸರು 13 ಮಕ್ಕಳನ್ನು ರಕ್ಷಿಸಿದ್ದಾರೆ. ಬಸವನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.