News Karnataka Kannada
Monday, May 06 2024
ಬೆಂಗಳೂರು

ಬೆಂಗಳೂರಿನಲ್ಲಿ ವಾರಾಂತ್ಯದ ಕರ್ಫ್ಯೂ ಸದ್ಯಕ್ಕಿಲ್ಲ: ಬಿಬಿಎಂಪಿ

Bbmp Bng
Photo Credit :

ಬೆಂಗಳೂರು: ‘ಕೋವಿಡ್‌ ತಡೆಯುವ ಸಲುವಾಗಿ ಬೆಂಗಳೂರಿನಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸುವ ಪ್ರಸ್ತಾಪ ಸದ್ಯಕ್ಕೆ ನಮ್ಮ ಮುಂದಿಲ್ಲ’ ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ಗೌರವ್‌ ಗುಪ್ತ ಹೇಳಿದರು.

ನೆರೆಯ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿಕೊಂಡ ಎಂಟು ಜಿಲ್ಲೆಗಳಲ್ಲಿ ಮಾತ್ರ ಸದ್ಯ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ಈಗ ಸರಾಸರಿ 450ರಷ್ಟು ಕೋವಿಡ್‌ ಪ್ರಕರಣಗಳು ಮಾತ್ರ ಪತ್ತೆಯಾಗುತ್ತಿವೆ. ಸದ್ಯಕ್ಕೆ ನಗರದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸುವ ಅಗತ್ಯ ಇಲ್ಲ’ ಎಂದು ಹೇಳಿದರು.

ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ ತಜ್ಞರ ಜೊತೆ ಮುಖ್ಯಮಂತ್ರಿ ಹಾಗೂ ಹಿರಿಯ ಸಚಿವರು ವಿಸ್ತೃತ ಚರ್ಚೆ ನಡೆಸಿ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದಾರೆ. ನಗರದಲ್ಲಿ ರಾತ್ರಿ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಅದರ ಪ್ರಕಾರ ಪೊಲೀಸ್‌ ಇಲಾಖೆ ಕ್ರಮಕೈಗೊಳ್ಳಲಿದೆ’ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು