News Karnataka Kannada
Friday, May 03 2024
ಬೆಂಗಳೂರು

ಬೆಂಗಳೂರಿನಲ್ಲಿ ಶಂಕಿತ ಐಸಿಸ್ ಉಗ್ರ ಅರೆಸ್ಟ್

Arrest 22082021
Photo Credit :

ಬೆಂಗಳೂರು : ನಿಷೇಧಿತ ಉಗ್ರಗಾಮಿ ಸಂಘಟನೆ ಐಸಿಸ್ ನ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ(ಎನ್ ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಶಂಕಿತ ಉಗ್ರ ಜೊಹೈಬ್ ಮನ್ನಾ ನನ್ನು ಬಂಧಿಸಲಾಗಿದೆ.

ಈತ ಐಸಿಸ್, ಐಎಸ್ಐಎಲ್ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದು, ಮುಸ್ಲಿಂ ಯುವಕರನ್ನು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಪ್ರೇರೇಪಿಸುತ್ತಿದ್ದ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.

ಶಂಕಿತ ಉಗ್ರ ಜೊಹೈಬ್ ಸೌದಿ ಅರೇಬಿಯಾದಿಂದ ಬೆಂಗಳೂರಿಗೆ ಬಂದು ಧರ್ಮ ಭೋದನೆ ನೆಪದಲ್ಲಿ ಇಕ್ರಾ ಕ್ಯಾಂಪ್ ನಡೆಸಿ ಯುವಕರಿಗೆ ಉಗ್ರ ಚಟುವಟಿಕೆಯ ಕುರಿತು ತರಬೇತಿ ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಲವು ಯುವಕರನ್ನು ಸಿರಿಯಾಗೆ ಕಳುಹಿಸಿ ಐಸಿಸ್ ಚಟುವಟಿಕೆಗಳಲ್ಲಿ ತೊಡಗಿಸಿದ ಬಗ್ಗೆ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು